ಕಾರವಾರ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2022-23ನೇ ಸಾಲಿನ ಹಿಂದುಳಿದ ವರ್ಗ-1, 2ಎ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಹೊಲಿಗೆ ಯಂತ್ರ ನೀಡುವ ಯೋಜನೆ ಅನುಷ್ಠಾನಗೊಳಿಸಲಾಗಿದೆ.
ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ, ಒಕ್ಕಲಿಗ, ಲಿಂಗಾಯತ ಮತ್ತು ಮರಾಠ ಹಾಗೂ ಇದರ ಉಪ ಸಮುದಾಯಗಳು ಹೊರತುಪಡಿಸಿ ಈ ಯೋಜನೆಯಡಿ ಸೌಲಭ್ಯ ಪಡೆಯಲು 18ರಿಂದ 55 ವಯೋಮಾನದವರು ಸೇವಾಸಿಂಧು ತಂತ್ರಾಶದ ಮೂಲಕ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಸೆಂಟರ್ ಮೂಲಕ ಫೆ.20ರೊಳಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸದ ನಂತರ ಆನ್ಲೈನ್ ಅರ್ಜಿ ಜೊತೆ ಫೊಟೋ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಜಾತಿ, ಆದಾಯ ಪ್ರಮಾಣ ಪತ್ರ ಹಾಗೂ ಹೊಲಿಗೆ ತರಬೇತಿ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿ ಎಲ್ಲಾ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಹೈಚರ್ಚ್ ಹತ್ತಿರ, ಕಾರವಾರ ವಿಳಾಸಕ್ಕೆ ತಲುಪಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382223229 ನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.