ಕಾರವಾರ: ಪ್ರತಿ ಸೋಮವಾರ ಕಛೇರಿಯ ಕೇಂದ್ರ ಸ್ಥಾನದಲ್ಲಿರುವ ಬಗ್ಗೆ ತಮ್ಮ ತಮ್ಮ ಕಛೇರಿಗಳ ಸೂಚನಾ ಫಲಕಗಳಲ್ಲಿ ನಮೂದಿಸಿ, ಸಾರ್ವಜನಿಕರಿಗೆ ಅಗತ್ಯ ಸೇವೆ ಒದಗಿಸಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುಷ್ಠಾನಗೊಳ್ಳುತ್ತಿರುವ ಅತೀ ಮಹತ್ವದ ಯೋಜನೆಗಳಾದ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಜಲ ಜೀವನ ಮಿಷನ್, ಸ್ವಚ್ಛ ಭಾರತ್ ಅಭಿಯಾನ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ, ಅಮೃತ ಗ್ರಾಮ ಯೋಜನೆ, ಆರೋಗ್ಯ ಅಮೃತ ಅಭಿಯಾನ, ವಸತಿ ಯೋಜನೆ ಹೀಗೆ ವಿವಿಧ ಯೋಜನೆಯಗಳನ್ನು ಸಾರ್ವಜನಿಕರಿಗೆ ಅನೂಕೂಲವಾಗುವ ರೀತಿಯಲ್ಲಿ ತಲುಪಿಸಬೇಕಾಗಿರುವುದರಿಂದ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಸಂಬoಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪ್ರತಿ ಸೋಮವಾರದಂದು ಕಡ್ಡಾಯವಾಗಿ ಕಛೇರಿಯ ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು, ಆ ದಿನ ಯಾವುದೇ ಸಭೆ ಸಮಾರಂಭಗಳನ್ನು ಏರ್ಪಡಿಸದೇ ಸಾರ್ವಜನಿಕರಿಗೆ ನಿಗದಿತ ಸೇವೆಯನ್ನು ನೀಡಲು ಅವರು ಸೂಚಿಸಿದ್ದಾರೆ.