Slide
Slide
Slide
previous arrow
next arrow

ಭಾಷಣ ಸ್ಪರ್ಧೆಗೆ ಯುವಜನರಿಂದ ಅರ್ಜಿ ಆಹ್ವಾನ

300x250 AD

ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರವು 2022-23ನೇ ಸಾಲಿನ ಜಿಲ್ಲಾ ಮಟ್ಟದಲ್ಲಿ ಭಾಷಣ ಸ್ಪರ್ಧೆಗೆ ಯುವ ಜನರ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ದೇಶದಾದ್ಯಂತ ಯುವ ಜನರನ್ನು ಮೂರು ಹಂತದಲ್ಲಿ ಆಯ್ಕೆ ಮಾಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದವರನ್ನು ರಾಜ್ಯ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ಆಯ್ಕೆಯಾದವರನ್ನು ರಾಷ್ಟ್ರ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.
ಅರ್ಜಿ ಸಲ್ಲಿಸುವ ಯುವಜನರು ಉತ್ತರ ಕನ್ನಡ ಜಿಲ್ಲೆಯವರಾಗಿರಬೇಕು. 18ರಿಂದ 25 ವಯೋಮಿತಿಯಲ್ಲಿರಬೇಕು. ಉತ್ತಮ ಸಂವಹನ ಕೌಶಲ್ಯವನ್ನು ಹೊಂದಿರಬೇಕು. ಇಂಗ್ಲೀಷ್, ಹಿಂದಿ ಮತ್ತು ಕನ್ನಡ ಭಾಷೆಯನ್ನು ಪರಿಣಾಮಕಾರಿಯಾಗಿ ಬರೆಯುವ ಮತ್ತು ಮಾತನಾಡುವ ಕೌಶಲ್ಯವನ್ನು ಹೊಂದಿರಬೇಕು.
ರಾಷ್ಟ್ರ ಮಟ್ಟದಲ್ಲಿ ಆಯ್ಕೆಯಾದ ಯುವ ಜನರಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನಗಳನ್ನು ನೀಡಲಾಗುವದು, ಪ್ರಥಮ 2 ಲಕ್ಷ,ದ್ವಿತೀಯ 1.5 ಲಕ್ಷ, ತೃತೀಯ 1 ಲಕ್ಷ ಹಾಗೂ ಸಮಾಧಾನಕರ ಬಹುಮಾನ 50,000ವರೆಗೆ ನೀಡಲಾಗುವುದು. ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳು ವರ್ಚುವಲ್ ಮೋಡ್ ನಲ್ಲಿ ನಡೆಸಲಾಗುವದು. ಭಾಷಣದ ಸಮಯ: 04 ನಿಮಿಷ ಮಾತ್ರ. ಭಾಷಣದ ವಿಷಯವನ್ನು ಜ.24ರ ನಂತರ ತಿಳಿಸಲಾಗುವದು. ರಾಷ್ಟ್ರ ಮಟ್ಟದ ಸ್ಪರ್ಧೆಯು ದೆಹಲಿಯಲ್ಲಿ ನಡೆಯಲಿದೆ.
ಆಸಕ್ತ ಯುವಜನರು ಜ.26ರ ಒಳಗಾಗಿ ತಮ್ಮ ಹೆಸರನ್ನು ಜಿಲ್ಲಾ ನೆಹರು ಯುವ ಕೇಂದ್ರ, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ, ಕಾರವಾರ ಇಲಿಗೆ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9449992195, ದೂರವಾಣಿ ಸಂಖ್ಯೆ: 08382226965 ಗೆ ಸಂಪರ್ಕಿಸಬಹುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top