Slide
Slide
Slide
previous arrow
next arrow

ಹಾರ್ನ್ಬಿಲ್ ಹಕ್ಕಿ ಹಬ್ಬ: ದಂಡಕಾರಣ್ಯದಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಪ್ರಬಂಧ ಸ್ಪರ್ಧೆ

300x250 AD

ದಾಂಡೇಲಿ: ಅರಣ್ಯ ಇಲಾಖೆಯ ಆಶ್ರಯದಲ್ಲಿ ಫೆಬ್ರುವರಿಯಲ್ಲಿ ನಡೆಯಲಿರುವ ಹಾರ್ನ್ಬಿಲ್ ಹಬ್ಬದ ನಿಮಿತ್ತವಾಗಿ ದಂಡಕಾರಣ್ಯ ಇಕೋ ಪಾರ್ಕಿನಲ್ಲಿ ನಗರದ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಮತ್ತು ಪ್ರಬಂಧ ಸ್ಪರ್ಧೆ ನಡೆಯಿತು.
ಸರಿಸುಮಾರು 450ಕ್ಕೂ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಹಳಿಯಾಳ ಉಪವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಕೆ.ಶೇಟ್ ಅವರ ಮಾರ್ಗದರ್ಶನದಲ್ಲಿ, ವಲಯಾರಣ್ಯಾಧಿಕಾರಿ ಅಪ್ಪರಾವ್ ಕಲಶೆಟ್ಟಿಯವರ ನೇತೃತ್ವದಲ್ಲಿ ಮತ್ತು ಅರಣ್ಯ ಸಿಬ್ಬಂದಿಗಳ ಸಹಕಾರದಲ್ಲಿ ಈ ಕಾರ್ಯಕ್ರಮ ನಡೆಯಿತು. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮಕ್ಕಳ ಜೊತೆ ಮಕ್ಕಳಂತೆ ಇದ್ದು, ಕಾರ್ಯಕ್ರಮವನ್ನು ನಡೆಸಿಕೊಟ್ಟು ಎಲ್ಲರ ಗಮನ ಸೆಳೆದಿದ್ದಾರೆ.
ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಕೆ.ಶೇಟ್, ವಲಯಾರಣ್ಯಾಧಿಕಾರಿ ಅಪ್ಪರಾವ್ ಕಲಶೆಟ್ಟಿ, ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ವಾಸರೆ, ನಗರಸಭೆಯ ಸದಸ್ಯೆ ಯಾಸ್ಮಿನ್ ಕಿತ್ತೂರು, ದಂಡಕಾರಣ್ಯ ಇಕೋ ಪಾರ್ಕ್ ಅಭಿವೃದ್ಧಿ ಸಮಿತಿಯ ಸದಸ್ಯರಾದ ಯು.ಎಸ್.ಪಾಟೀಲ್, ಕೀರ್ತಿ ಗಾಂವಕರ್, ಉಪ ವಲಯಾರಣ್ಯಾಧಿಕಾರಿ ಸಂದೀಪ್ ನಾಯ್ಕ, ಲೋಕೇಶ್, ಆನಂದ ರಾಥೋಡ್, ಅರುಣ್ ಹಂಪಿಹೊಳಿ, ದಯಾನಂದ, ಅರಣ್ಯ ಸಿಬ್ಬಂದಿಗಳಾದ ಗಜಾನನ ಕರಂಗಾವಕರ್, ವೀರೇಶ್, ಅಖಂಡಪ್ಪ, ನಾರಾಯಣ, ಜಗದೀಶ್, ನಿಲೇಶ್, ದೀಪಕ್, ಕೃಷ್ಣ ನಡಿಗೇರ್, ಅಜಯ್, ಹಾಗೂ ವಿವಿಧ ಶಾಲೆಗಳ ಶಿಕ್ಷಕ ವೃಂದದವರು, ದಂಡಕಾರಣ್ಯ ಇಕೋ ಪಾರ್ಕಿನ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳ ಪಾಲಕರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top