Slide
Slide
Slide
previous arrow
next arrow

ಮಕ್ಕಳ ಕಳ್ಳ ಸಾಗಣೆ ಪ್ರಕರಣ ತಡೆಯಲು ಶ್ರಮ ವಹಿಸಿ: ರಾಘವೇಂದ್ರ ಭಟ್

300x250 AD

ಕಾರವಾರ: ಮಕ್ಕಳ ಕಳ್ಳ ಸಾಗಣೆ ಪ್ರಕರಣಗಳು ಇತ್ತೀಚಿನ ದಿನಮಾನಗಳಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಸಂಭವಿಸುತ್ತಿದ್ದು, ಇದು ಸಮಾದಲ್ಲಿ ಅತ್ಯಂತ ವಿನಾಶಕಾರಿ ಬೆಳವಣಿಗೆ. ಇದನ್ನು ತಡೆಗಟ್ಟಲು ಅಧಿಕಾರಿಗಳ ವರ್ಗ ಶ್ರಮ ವಹಿಸಿ ಕೆಲಸ ಮಾಡಬೇಕು ಎಂದು ಯುನಿಸೆಫ್ ಕನ್ಸಲ್ಟೆಂಟ್ ರಾಘವೇಂದ್ರ ಭಟ್ ಹೇಳಿದರು. 
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಸ್ತ್ರೀಶಕ್ತಿ ಸಭಾಭವನ ಆಯೋಜಿಸಲಾಗಿದ್ದ, ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಗಾರವನ್ನು ಜ್ಯೋತಿ ಬೆಳಗಿಸುವುದರ ಮುಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕಾರ್ಮಿಕ ಕಳ್ಳ ಸಾಗಣಿಕೆಯ ವಿಧಗಳು ಹಾಗೂ ಅನೈತಿಕ ಸಾಗಾಟ ಮತ್ತು ಮಾರಾಟದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಅತ್ಯಂತ ಬುದ್ಧಿವಂತರು, ಸಾಧಕರು ಇರುವ ಈ ಜಿಲ್ಲೆಯಲ್ಲೂ ಮಕ್ಕಳ ಕಳ್ಳ ಸಾಗಣೆ ಪ್ರಕರಣಗಳು ಹೆಚ್ಚಾಗಿರುವುದು ಕಂಡು ಬರುತ್ತಿದ್ದು ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ತಡೆಗಟ್ಟಲು ತರಬೇತಿಯಲ್ಲಿ ಭಾಗವಹಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪೊಲೀಸ್ ನಿರೀಕ್ಷಕ ಜಾಕ್ಷನ್ ರಾಬರ್ಟ್ ಡಿಸೋಜಾ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆಯ ವಿಧಗಳು ಹಾಗೂ ವಿವಿಧ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಐಸಿಡಿಎಸ್ ನಿರೂಪಣಾಧಿಕಾರಿ ವಿರೂಪಾಕ್ಷ ಪಾಟೀಲರವರು ಮಾನವ ಕಳ್ಳ ಸಾಗಾಣೆ ತಡೆಗಟ್ಟುವಲ್ಲಿ ಜವಾಬ್ದಾರಿಯುತ ಅಧಿಕಾರಿಗಳು ತಮ್ಮ ಮನೋಭಾವನೆಯನ್ನು ಬದಲಾಯಿಸಬೇಕಾಗಿದೆಂದು ತಿಳಿಸಿದರು.
ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ಯಾಮಲಾ.ಸಿ.ಕೆ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟುವಿಕೆಯ ತರಬೇತಿಯ ಅವಶ್ಯಕತೆ ಮತ್ತು ಪ್ರಕರಣದ ಗಂಭೀರತೆ ಹಾಗೂ ಈ ಪ್ರಕರಣಗಳಿಂದ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಮಾರಕವಾಗಿದೆ ಎಂದರು. 
ವಕೀಲ ಎ.ಆರ್.ಬಿ ಡಿಸೋಜಾ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವುದರಲ್ಲಿ ಪೋಕ್ಸೋ ಮತ್ತು ITPA ಕಾಯ್ದೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಗಾರದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೋನಲ್ ಐಗಳ, ಹಳಿಯಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ.ಎಸ್.ಲಕ್ಷ್ಮೀದೇವಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top