ಬೆಂಗಳೂರು: ಈ ಬಾರಿ ಬಜೆಟ್ನಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಲಾಗಿದ್ದು, ಕಾರವಾರದ ಬಳಿ ಸೀ ಫುಡ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಸೀಮೆಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಪರಿವರ್ತಿಸಬೇಕು. ಅದಕ್ಕಾಗಿ 40ಕೋಟಿ ರೂಪಾಯಿ ಮೀಸಲಿಡಲಾಗುವುದು. ಪರಿವರ್ತನೆ ಆಗುವವರೆಗೆ ಸಹಾಯಧನ ಮುಂದುವರಿಸಲಾಗುವುದು ಎಂದಿದ್ದಾರೆ.