Slide
Slide
Slide
previous arrow
next arrow

ಸೇನಾ ಪೂರ್ವ ತರಬೇತಿ ಶಾಲಾ ಪ್ರವೇಶ: ಫೆ.25ಕ್ಕೆ ದೈಹಿಕ ಪರೀಕ್ಷೆ

300x250 AD

ಕಾರವಾರ: ಮಾಜಾಳಿಯ ವೀರ ಬಹಾದ್ದೂರ ಹೆಂಜಾ ನಾಯ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯ ಪ್ರವೇಶಾತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶಿರಸಿಯ ಶ್ರೀಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ.25ರಂದು ಬೆಳಿಗ್ಗೆ 7 ಗಂಟೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ www.bcwd.karanatak.gov.in ಮೂಲಕ ಅರ್ಜಿಯನ್ನು ಸಲ್ಲಿಸಿ ಆನ್ಲೈನ್ ಅಪ್ಲಿಕೇಶನ್ ಪ್ರತಿ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಎರಡು ಫೋಟೋ, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಮುಂತಾದ ದಾಖಲೆಗಳೊಂದಿಗೆ ನಿಗದಿಪಡಿಸಿದ ದಿನಾಂಕದಂದು ಹಾಜರಾಗಲು ಸೂಚಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382226588 ಗೆ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top