ಭಟ್ಕಳ: ಇಲ್ಲಿನ ಸೋನಾರಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಇದೇ ಮೊದಲ ಬಾರಿಗೆ ವಾರ್ಷಿಕ ಸ್ನೇಹ ಸಮ್ಮೇಳನವು ಮಾ.5ರಂದು ನಡೆಯಲಿದೆ.
ಶಾಲೆಯ ಹಳೆ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿ, ಮುಖ್ಯಶಿಕ್ಷಕರು ಹಾಗೂ ಎಲ್ಲಾ ಶಿಕ್ಷಕ ವೃಂದದ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ 5ಕ್ಕೆ ಶಾಸಕ ಸುನೀಲ್ ನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪುರಸಭೆಯ ಅಧ್ಯಕ್ಷ ಪರ್ವೇಜ್ ಕಾಶಿಂಜಿ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಗೋವಿಂದ ನಾಯ್ಕ ಹಸ್ತಪತ್ರಿಕೆಯನ್ನ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತಿ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ್ ಚಿಕ್ಕನ್ಮನೆ, ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ್ ಮೊಗೇರ, ಅತಿಥಿಗಳಾಗಿ ಪುರಸಭೆ ಸದಸ್ಯ ರಾಘವೇಂದ್ರ ಶೇಟ್ ಪಾಲ್ಗೊಳ್ಳಲಿದ್ದಾರೆ. ಬಳಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿ ಕಾರ್ಯಕ್ರಮ ನಡೆಯಲಿದೆ.