ಕುಮಟಾ:ಇಲ್ಲಿನ ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಬಿ.ಕೆ. ಭಂಡಾರಕರ್ಸ ಸರಸ್ವತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಕು. ರಾಹುಲ್ ಉಮೇಶ್ ಶಾನಭಾಗ ಜೆ.ಇ.ಇ ಮೈನ್ಸ್ ಪೇಪರ್ -2 2023ರ ಬಿ. ಆರ್ಕ್ನಲ್ಲಿ ಶೇ.98.75 ಫಲಿತಾಂಶ ಗಳಿಸಿ ಮಹತ್ವದ ಸಾಧನೆ ಗೈಯ್ದು ಕಾಲೇಜಿನ ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕ ಗುರುರಾಜ ಶೆಟ್ಟಿ, ಪ್ರಾಂಶುಪಾಲ ಕಿರಣ ಭಟ್ ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿ ಮುಂದಿನ ಹಂತದ ಪರೀಕ್ಷೆಗಳಿಗೆ ಶುಭ ಹಾರೈಸಿದ್ದಾರೆ.