ದಾಂಡೇಲಿ: ನಗರದ ರೋಟರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ, ಸಡಗರದಿಂದ ವಾರ್ಷಿಕೋತ್ಸವ ಕಾರ್ಯಕ್ರಮವು ಜರುಗಿತು.
ರೋಟರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮೇಲ್ವಿಚಾರಕ ಬಸವರಾಜ ಇಳಿಗೇರ ಮಾತನಾಡುತ್ತ, ವಿದ್ಯಾರ್ಥಿಗಳ ಪ್ರತಿಭೆಗಳನ್ನು ಮುಖ್ಯಭೂಮಿಕೆಗೆ ತರಲು ವಾರ್ಷಿಕೋತ್ಸವ ಕಾರ್ಯಕ್ರಮ ಮಹತ್ವಪೂರ್ಣವಾಗಿದೆ. ವಿದ್ಯಾರ್ಥಿಗಳಲ್ಲಿ ಸಾಧಿಸಬೇಕೆಂಬ ಛಲವಿದ್ದಲ್ಲಿ ಜೀವನದಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯ ಎಂದರು.
ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಯಿನಿ ಸುನೀತಾ ಸಾಳಸಕರ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ರೋಟರಿ ಶಿಕ್ಷಣ ಸಂಸ್ಥೆಯ ಸರ್ವ ಪದಾಧಿಕಾರಿಗಳ ಅಮೂಲ್ಯ ಮಾರ್ಗದರ್ಶನ ಮತ್ತು ಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿಗಳ ಸಹಕಾರದ ಜೊತೆಗೆ ವಿದ್ಯಾರ್ಥಿಗಳ ಪಾಲಕರ ಸಹಕಾರವು ಅತೀ ಮುಖ್ಯವಾಗಿದೆ. ಸಹಕರಿಸುತ್ತಿರುವ ಸರ್ವರಿಗೂ ಕೃತಜ್ಷತೆಗಳನ್ನು ಸಲ್ಲಿಸಿದರು.
ಮುಖ್ಯ ಅತಿಥಿಗಳಾಗಿ ಶಿಕ್ಷಕಿಯರಾದ ಭಾವನಾ ವಾಳಕೆ ಮತ್ತು ಅಮೃತಾ ಭಟ್ ಅವರುಗಳು ಭಾಗವಹಿಸಿ ಸಂದರ್ಭೋಚಿತವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಮಂಜುಳಾ ಬೇಲೂರು ಅವರು ಸ್ವಾಗತಿಸಿ, ವಂದಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮ ಮುಗಿದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.