ಕಾರವಾರ: ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ನಗರ ಹಾಗೂ ಗ್ರಾಮೀಣ ವತಿಯಿಂದ ಮಾ.10ರಂದು ನಗರದಲ್ಲಿ ನಡೆಯಲಿರುವ ಜಿಲ್ಲಾ ಬಿಜೆಪಿ ಮಹಿಳಾ ಸಮಾವೇಶದ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.
ಈ ಸಭೆಗೆ ಭಾರತ ಮಾತೆಗೆ ಪುಷ್ಪಾರ್ಚನೆಗೈಯ್ಯುವ ಮೂಲಕ ಚಾಲನೆ ನೀಡಲಾಯಿತು. ಶಾಸಕಿ ರೂಪಾಲಿ ಎಸ್.ನಾಯ್ಕ್ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶೋಭಾ ನಾಯ್ಕ್ ಮಾತನಾಡಿ, ಮಾ.10ರಂದು ನಡೆಯುವ ಮಹಿಳಾ ಸಮಾವೇಶದಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಮಹಿಳೆಯರು ಬರಬೇಕು. ಈ ಕಾರ್ಯಕ್ರಮಕ್ಕೆ ರಾಜ್ಯ ಅಥವಾ ಕೇಂದ್ರದಿಂದ ಮಹಿಳಾ ಗಣ್ಯರು ಪಾಲ್ಗೊಳ್ಳಲಿದ್ದು, ಮಹಿಳೆಯರಿಂದ ವಿವಿಧ ಕಾರ್ಯಕ್ರಮಗಳನ್ನು ನಡೆಸಬೇಕಿದೆ. ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಮಹಿಳಾ ಮೋರ್ಚಾದವರು ನೇತೃತ್ವ ವಹಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರ ಹಾಗೂ ಗ್ರಾಮೀಣ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ನಗರಸಭೆ ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಸದಸ್ಯರು, ನಗರಸಭೆ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.