ಭಟ್ಕಳ: ತಾಯಿಯಾದವಳು ತನ್ನ ಮಗುವನ್ನು ಪೋಷಿಸುವಂತೆ ಹೆಣ್ಣಾದವಳು ತಾನು ಕಂಡ ಕನಸನ್ನು ಅತ್ಯಂತ ಆರೈಕೆಯಿಂದ ಮತ್ತು ಧೈರ್ಯದಿಂದ ನನಸು ಮಾಡುವಲ್ಲಿ ಪ್ರಯತ್ನಿಸಿದಾಗ ಮಾತ್ರ ಯಶಸ್ಸನ್ನು ಪಡೆಯಲು ಸಾಧ್ಯ ಎಂದು ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಸೋಜಿಯಾ ಸೋಮನ್ ಹೇಳಿದರು.
ಅವರು ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡುತ್ತಾ, ಹದಿನಾರು ವರ್ಷಗಳಿಂದ ಭಟ್ಕಳದಲ್ಲಿ ಸೇವೆ ಸಲ್ಲಿಸುತ್ತಿದ್ದು, ಸ್ವ ಪ್ರಯತ್ನದಿಂದ ಕನ್ನಡ ಕಲಿತು ವಹಿಸಿಕೊಟ್ಟ ಎಲ್ಲ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ ಎಂದು ಹೇಳಿದರು.
ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುರೇಶ ನಾಯಕ ಮತ್ತು ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ವಿರೇಂದ್ರ ವಿ.ಶಾನಭಾಗ ಸ್ವಾಗತಿಸಿದರು. ಪ್ರಶಿಕ್ಷಣಾರ್ಥಿಗಳಾದ ಸನ್ನಿಧಿ ಮತ್ತು ಸಂಗಡಿಗರು ಪ್ರಾರ್ಥಿಸಿದರು, ಅನಸೂಯ ವಂದಿಸಿದರು ಮತ್ತು ದಾಕ್ಷಾಯಿಣಿ ನಿರೂಪಿಸಿದರು. ಮುಖ್ಯ ಅತಿಥಿಗಳಾದ ಸೋಜಿಯಾ ಸೋಮನ್ ಅವರನ್ನು ಭಟ್ಕಳದಲ್ಲಿ ಅವರು ನೀಡಿದ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.