ಜೊಯಿಡಾ: ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ಮಕರಂಧ ಸ್ವರಸಂಗೀತ ಕಲಾ ಸಂಸ್ಥೆ ಸಹಭಾಗಿತ್ವದಲ್ಲಿ ಮಾ.14ರಂದು ಉಳವಿಯ ಶ್ರೀಚೆನ್ನಬಸವೇಶ್ವರ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಶಾಸಕ ಆರ್.ವಿ.ದೇಶಪಾಂಡೆ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ವಹಿಸಲಿದ್ದಾರೆ. ಚೆನ್ನಬಸವೇಶ್ವರ ಟ್ರಸ್ಟ್ ಅಧ್ಯಕ್ಷ ಗಂಗಾಧರ ಕಿತ್ತೂರ, ಉಪಾಧ್ಯಕ್ಷ ಸಂಜಯ ಕಿತ್ತೂರ, ಉಳವಿ ಗ್ರಾ.ಪಂ. ಅಧ್ಯಕ್ಷೆ ಮಂಗಲಾ ಮಿರಾಶಿ, ಉಪಾಧ್ಯಕ್ಷ ಮಂಜುನಾಥ ಮೊಕಾಶಿ, ಹಿರಿಯ ಕವಿ ಸತೀಶ ಕುಲಕರ್ಣಿ, ಮಾಸ್ಕೇರಿ ಎಂ.ಕೆ.ನಾಯಕ, ಕೆವಿಜಿ ಬ್ಯಾಂಕ್ ವ್ಯವಸ್ಥಾಪಕ ದುರ್ಗೇಶ ದೊಡ್ಡಮನಿ, ಹಿರಿಯ ಪತ್ರಕರ್ತ ಎನ್.ಜಯಚಂದ್ರನ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮವನ್ನು ಸಂಗೀತ ನಿರ್ದೇಶಕ ಮೃತ್ಯುಂಜಯ ದೊಡ್ಡವಾಡ, ಮಕರಂದ ಸ್ವರ ಸಂಗೀತ ಕಲಾ ಸಂಸ್ಥೆಯ ಅಧ್ಯಕ್ಷ ರಾಜೇಶ್ವರಿ ಆರ್. ಭಿಷ್ಠನಗೌಡರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಸಂಯೋಜಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಮೃತ್ಯುಂಜಯ ದೊಡ್ಡವಾಡ ಮಾರ್ಗದರ್ಶನದಲ್ಲಿ ಸಮೂಹ ಗಾಯನ, ವಚನ ಗಾಯನ, ಕವಿಗೋಷ್ಠಿ, ಭಾವಸಂಗೀತ, ದಾಂಡೇಲಿಯ ಅಭಿಷೇಕ ಡ್ಯಾನ್ಸ್ ಅಕಾಡೆಮಿಯಿಂದ ಗೀತನೃತ್ಯ ಏರ್ಪಡಿಸಲಾಗಿದೆ. ದಾಂಡೇಲಿಯ ಸುಸ್ವರ ಸಂಗೀತ ವಿದ್ಯಾ ಸಂಸ್ಥೆ ಸಹಕಾರ ನೀಡಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಪಾಲ್ಗೊಳ್ಳಬೇಕೆಂದು ಕಾರ್ಯಕ್ರಮ ಸಮನ್ವಯ ವಕೀಲ ಜಯಾ ಡಿ.ನಾಯ್ಕ ಕೋರಿದ್ದಾರೆ.