ಕುಮಟಾ: ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಯನ್ನು ಕುಮಟಾ ಮಹಾಸತಿ ದೇವಾಲಯದ ಸಭಾಂಗಣದಲ್ಲಿ ಮಾ.26 ಮುಂಜಾನೆ 10 ಗಂಟೆಗೆ ಸಂಘಟಿಸಲಾಗಿದೆ ಎಂದು ತಾಲೂಕ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ಮಂಜುನಾಥ ಮರಾಠಿ ಹೇಳಿದ್ದಾರೆ.
ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಈ ಸಭೆಯಲ್ಲಿ ಉಪಸ್ಥಿತರಿರುವರು.
ಆಸಕ್ತ ಅರಣ್ಯ ಅತಿಕ್ರಮಣದಾರರು ಸಭೆಗೆ ಆಗಮಿಸಬೇಕಾಗಿ ತಾಲೂಕ ಅಧ್ಯಕ್ಷ ಮಂಜುನಾಥ ಮರಾಠಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.