Slide
Slide
Slide
previous arrow
next arrow

ಕ್ಷಯರೋಗ ಮುಕ್ತ ದೇಶಕ್ಕಾಗಿ ಶ್ರಮಿಸಬೇಕಿದೆ: ಡಿಸಿ ಕವಳಕಟ್ಟಿ

300x250 AD

ಕಾರವಾರ: ದೇಶವನ್ನು ಪೋಲಿಯೋದಿಂದ ಮುಕ್ತ ಮಾಡಲು ಹೇಗೆ ನಾವೆಲ್ಲರೂ ಶ್ರಮವಹಿಸಿದ್ದೇವೋ, ಹಾಗೆಯೇ ಇಂದು ಕ್ಷಯರೋಗವನ್ನು ದೇಶದಿಂದ ಮುಕ್ತ ಮಾಡಲು ನಾವೆಲ್ಲರೂ ಶ್ರಮವಹಿಸುವುದು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

‘ಹೌದು, ನಾವು ಕ್ಷಯ ರೋಗವನ್ನು ಕೊನೆಗೊಳಿಸಬಹುದು’ ಎಂಬ ಘೋಷಣೆಯೊಂದಿಗೆ ಆಯೋಜಿಸಲಾಗಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯದ ಸಮಸ್ಯೆಗೆ ಒಳಗಾದವರನ್ನು ಸಮಾಜ ನೋಡುವ ದೃಷ್ಟಿಕೋನ ಹೇಗಿರುತ್ತೆ ಎಂಬುವುದನ್ನು ನಾವುಗಳು ಕೋವಿಡ್ ಸಮಯದಲ್ಲಿ ನೋಡಿದ್ದೇವೆ. ರೋಗಗಳು ಮೇಲು-ಕೀಳು, ಬಡವ -ಶ್ರೀಮಂತ ಎನ್ನದೇ ಪ್ರತಿಯೊಬ್ಬರಿಗೂ ಬರುವಂಥದ್ದು. ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಜೀವಿಸುವ ಹಕ್ಕಿದೆ. ಹೀಗಾಗಿ ಕ್ಷಯ ರೋಗ ಅಥವಾ ಇತರೆ ರೋಗದ ಸಮಸ್ಯೆಗಳಿಗೆ ಒಳಗಾದವರನ್ನು ಗುರುತಿಸಿ ಅಂಥವರಿಗೆ ಸೂಕ್ತ ಚಿಕಿತ್ಸೆ ನೀಡುವುದು ಅವಶ್ಯಕತೆ ಇದೆ ಎಂದರು.
ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಶರದ ನಾಯಕ ಮಾತನಾಡಿದರು. ಶ್ವಾಸಕೋಶ ತಜ್ಞ ಡಾ.ಶ್ರೀನಿವಾಸ್, ಕ್ಷಯ ರೋಗದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಮಂಜುನಾಥ, ಜಿಲ್ಲಾ ತರಬೇತಿ ಕೇಂದ್ರ ಪ್ರಾಚಾರ್ಯರು ಡಾ.ವಿನೋದ ಭೂತೆ, ಡಿಎಲ್‌ಓ ಡಾ.ಶಂಕರರಾವ್, ಡಿಎಂಓ ಡಾ.ರಮೇಶರಾವ್, ಕುಟುಂಬ ಕಲ್ಯಾಣ ಅಧಿಕಾರಿ ಅನ್ನಪೂರ್ಣ ವಸ್ತ್ರದ, ಡಿಎಸ್‌ಓ ಡಾ.ಅರ್ಚನಾ ನಾಯಕ, ತಾಲೂಕು ಅರೋಗ್ಯ ಅಧಿಕಾರಿ ಡಾ.ಸೂರಜ ನಾಯಕ, ಆಶಾ ಕಾರ್ಯಕರ್ತರು, ಆರೋಗ್ಯ ಸಿಬ್ಬಂದಿಗಳು ಹಾಗೂ ವಿವಿಧ ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳು ಇದ್ದರು.

300x250 AD
Share This
300x250 AD
300x250 AD
300x250 AD
Back to top