ಹುಬ್ಬಳ್ಳಿ: ದಾಖಲೆಗಳಿಲ್ಲದೆ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಇಬ್ಬರನ್ನು ಹಳೇ ಹುಬ್ಬಳ್ಳಿ ಪೊಲೀಸ್ ಬಂಧಿಸಿ, ಅವರಿಂದ 15 ಲಕ್ಷ ರೂ. ವಶಪಡಿಸಿಕೊಂಡಿರುವ ಘಟನೆ ಭಾನುವಾರ ನಗರದ ಹೊರವಲಯದ ಕಾರವಾರ ರಸ್ತೆ ಚೆಕ್ ಪೋಸ್ಟ್ ಬಳಿ ನಡೆದಿದೆ.
ಬೆಳಿಗ್ಗೆ 11 ಗಂಟೆಗೆ ಕುಮಟಾದಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಆಗಮಿಸಿದ ಇಬ್ಬರ ಹಣ ಸಾಗಾಟ ನಡೆಸಿದ್ದರು. ಪೊಲೀಸರು ಚೆಕ್ ಪೋಸ್ಟ್ ತಪಾಸಣೆ ಮಾಡುವ ವೇಳೆ ಹಣ ಕಾರಿನಲ್ಲಿ ಸಾಗಿಸುತ್ತಿರುವುದು ತಿಳಿದು ಬಂದಿದೆ. ಹಳೇ ಹುಬ್ಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ವಸ್ತುಗಳ ಖರೀದಿಗೆ ಬಂದಿದ್ದರು ಎನ್ನಲಾಗುತ್ತಿದೆ.