Slide
Slide
Slide
previous arrow
next arrow

ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿದ ವಿವೇಕ್ ಹೆಬ್ಬಾರ್

300x250 AD

ಮುಂಡಗೋಡ : ಸಚಿವ ಶಿವರಾಮ ಹೆಬ್ಬಾರ್ ಸಮೂಹ ಸಂಸ್ಥೆ ವಿ.ಆಯ್.ಎನ್.ಪಿ ಇನ್ಪ್ರಾ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ ಹಾಗೂ ಮೆಂಡಾ ಫೌಂಡೇಶನ್ ಬೆಂಗಳೂರು ಸಹಭಾಗಿತ್ವದಲ್ಲಿ ಕ್ಷೇತ್ರದಾದ್ಯಂತ 20 ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗೆ 35 ಲಕ್ಷ ರೂಪಾಯಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನು ಅಳವಡಿಸಲಾಗಿದೆ.

ಯುವ ನಾಯಕ ವಿವೇಕ್ ಹೆಬ್ಬಾರ್ ಪಾಳಾದ ಮಹಾತ್ಮಾಜೀ ಪ್ರೌಢಶಾಲೆಗೆ ಅಳವಡಿಸಿರುವ ಸ್ಮಾರ್ಟ್ ಕ್ಲಾಸ್ ಅನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಎಸ್.ಡಿ.ಎಮ್.ಸಿ ಸದಸ್ಯರು ಯುವನಾಯಕರನ್ನು ಸನ್ಮಾನಿಸಿ ಅಭಿನಂದಿಸಿದರು.

300x250 AD

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಮಹೇಶ್ ಹೊಸಕೊಪ್ಪ, ಗ್ರಾಮಪಂಚಾಯತ ಅಧ್ಯಕ್ಷರಾದ ಚಂದ್ರು ಗೌಡ್ರು, ಪ್ರಮುಖರಾದ ಗುಡ್ಡಪ್ಪ ಕಾತೂರ, ಕೆ.ಸಿ.ಗಲಭಿ.ಹಾಲಪ್ಪ ಕೊಡನವರ್ ಸೇರಿದಂತೆ ಸ್ಥಳೀಯ ಮುಖಂಡರು ಸೇಲ್ಕೊ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top