ಕಾರವಾರ: ನೆಹರು ಯುವ ಕೇಂದ್ರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯವು ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ 2 ಹುದ್ಧೆಯಂತೆ ತಾತ್ಕಾಲಿಕವಾಗಿ ಒಂದು ಅಥವಾ 2 ವರ್ಷದ ಅವಧಿಗೆ ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದಾರೆ.
ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು, 18 ರಿಂದ 29 ವಯೋಮನದವರಾಗಿರಬೇಕು, ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ, ಸಂಸ್ಥೆ, ಸರಕಾರಿ, ಅರೆ ಸರಕಾರಿ ಸಂಸ್ಥೆ ಗಳಲ್ಲಿ ಸೇವೆ ಸಲ್ಲಸುತ್ತಿರಬಾರದು, ಇದೊಂದು ಪೂರ್ಣ ಕಾಲಿಕ ಹುದ್ದೆಯಾಗಿದ್ದು, ಸಾಮಾಜಿಕ ಕಳಕಳಿಯುಳ್ಳ ಅಭ್ಯರ್ಥಿಗಳು ಸ್ವ ಇಚ್ಛೆಯಿಂದ ತಮ್ಮ ಪೂರ್ಣ ವಿವರಗಳೊಂದಿಗೆ ಅರ್ಜಿಯನ್ನು ಎಲ್ಲ ಪ್ರಮಾಣ ಪತ್ರಗಳನ್ನು ದೃಢೀಕರಿಸಿ ಸಲ್ಲಸತಕ್ಕದ್ದು, ಆಯ್ಕೆ ಆದವರಿಗೆ ಗೌರವ ಧನ ರೂ.5,000 ತಿಂಗಳಿಗೆ ನೀಡಲಾಗುವದು.
ಆಸಕ್ತರು ಏ.04 ರೊಳಗೆ ಕಚೇರಿ ವೆಬ್ ಸೈಟ್ http://nyks.nic.in ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ TEL:+9108382226965, tel:+919449992195ಗೆ ಸಂಪರ್ಕಿಸಿ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.