Slide
Slide
Slide
previous arrow
next arrow

ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶಿರಸಿಯ ಗೀತಾ ಭೋವಿ ನೇಮಕ

300x250 AD

ಶಿರಸಿ : ತಾಲೂಕಿನ ಇಟಗುಳಿಯ ಗೀತಾ ಭೋವಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ರಾಷ್ಟ್ರೀಯ ಮಹಿಳಾ ಅಧ್ಯಕ್ಷೆ ನೆಟ್ಟಾ ಡಿಸೋಜಾ ಅವರ ಆದೇಶದಂತೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ ಅವರು ನೇಮಕಾತಿ ಆದೇಶ ಮಾಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ, ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಆದೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ.‌

ಈ ಹಿಂದೆ ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದಲ್ಲಿ ಕೆಲಸ ಮಾಡಿದ್ದ ಗೀತಾ ಭೋವಿ, ಇಟಗುಳಿ ಗ್ರಾಪಂ ನಿಂದ ನಾಲ್ಕು ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ ಎಂಬುದು ಉಲ್ಲೇಖನೀಯ.

300x250 AD

Share This
300x250 AD
300x250 AD
300x250 AD
Back to top