ಅಂಕೋಲಾ: ಭಾರತೀಯ ಜನತಾ ಪಕ್ಷದಿಂದ ಕಾರವಾರ ಅಂಕೋಲಾ ಕ್ಷೇತ್ರದ ಅಭ್ಯರ್ಥಿಯಾಗಿ ಹಾಲಿ ಶಾಸಕಿ ರೂಪಾಲಿ ನಾಯ್ಕ್ ತಮ್ಮ ನಾಮಪತ್ರ ಸಲ್ಲಿಸಿದರು.
ನಗರದ ಮಾಲಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಹಸ್ರಾರು ಸಂಖ್ಯೆಯ ಕಾರ್ಯಕರ್ತರ ಹರ್ಷೋದ್ಗಾರಗಳ ನಡುವೆ ಮೆರವಣಿಗೆಯಲ್ಲಿ ನಗರಸಭೆ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ, ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಈ ವೇಳೆ ಗೋವಾ ಮುಖ್ಯ ಮಂತ್ರಿ ಪ್ರಮೋದ ಸಾವಂತ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಇನ್ನಿತರರು ಉಪಸ್ಥಿತರಿದ್ದರು.