ಭಟ್ಕಳ: ದ್ವಿತೀಯ ಪಿಯು 2023ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ಪಟ್ಟಣದ ಸಿದ್ಧಾರ್ಥ ಪದವಿಪೂರ್ವ ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಕುಳಿತ ಒಟ್ಟೂ 263 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡಾ 100 ಪ್ರತಿಶತ ಫಲಿತಾಂಶ ದಾಖಲಿಸಿ ಸಾಧನೆ ಗೈದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಕುಳಿತ ಒಟ್ಟೂ 227 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 100 ಫಲಿತಾಂಶ ದಾಖಲಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಕುಳಿತ 36 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡಾ 100 ಫಲಿತಾಂಶ ದಾಖಲಾಗಿದೆ. 131 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಹಾಗೂ 114 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಸಿ.ಆರ್.ಪೂರ್ಣ 583 (97.17%) ಅಂಕ ಪಡೆದು ಪ್ರಥಮ ಸ್ಥಾನ, ಪ್ರೀತಿ ಶೆಟ್ಟಿ 581 (96.83%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಹಾಗೂ ಡಿ.ನೇಹಾ ಮತ್ತು ಯೋಗಿತಾ ನಾಯ್ಕ 579 (96.50%) ಅಂಕ ಪಡೆದು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಗಣಿತ ವಿಷಯದಲ್ಲಿ 6 ವಿದ್ಯಾರ್ಥಿಗಳು 100ಕ್ಕೆ 100, ಗಣಕಯಂತ್ರ ವಿಜ್ಞಾನ ವಿಷಯದಲ್ಲಿ 10 ವಿದ್ಯಾರ್ಥಿಗಳು 100ಕ್ಕೆ 100, ರಸಾಯನ ಶಾಸ್ತ್ರದಲ್ಲಿ 2 ವಿದ್ಯಾರ್ಥಿಗಳು 100ಕ್ಕೆ 100 ಹಾಗೂ ಜೀವಶಾಸ್ತ್ರ ವಿಷಯದಲ್ಲಿ ಓರ್ವ ವಿದ್ಯಾರ್ಥಿ 100ಕ್ಕೆ 100 ಅಂಕ ಪಡೆದು ಸಾಧನೆ ಗೈದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 7 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 20 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಭೂಮಿಕಾ ನಾಯ್ಕ 600ಕ್ಕೆ 576 ಅಂಕ (96%) ಪಡೆದು ಪ್ರಥಮ ಸ್ಥಾನ, ತೃಪ್ತಿ ಜೈನ್ 572 ಅಂಕ (95.33%) ಪಡೆದು ದ್ವಿತೀಯ ಸ್ಥಾನ ಹಾಗೂ ಪ್ರಿಯಾಂಕ ಗೊಂಡ 565 ಅಂಕ (94.17%) ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ವ್ಯವಹಾರ ಅಧ್ಯಯನ ವಿಷಯದಲ್ಲಿ ಓರ್ವ ವಿದ್ಯಾರ್ಥಿ 100ಕ್ಕೆ 100 ಅಂಕ ಪಡೆದುಕೊಂಡಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.