ಶಿರಸಿ: ಕಳೆದ 25 ವರ್ಷಗಳಿಂದ ಬಿಜೆಪಿ ಹಿಡಿತದಲ್ಲಿರುವ ಶಿರಸಿ- ಸಿದ್ದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಒಂದು ಮಟ್ಟಿನ ಜಿದ್ದಾಜಿದ್ದಿ ಹೋರಾಟ ನಡೆದಿತ್ತು. ಇದೀಗ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, 5800 ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಭೀಮಣ್ಣ ನಾಯ್ಕ್ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಇಷ್ಟು ವರ್ಷದ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ.