Slide
Slide
Slide
previous arrow
next arrow

ಸಿಬಿಎಸ್‌ಇ: ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್‌ಗೆ 100% ಫಲಿತಾಂಶ

300x250 AD

ಹೊನ್ನಾವರ: ಶ್ರೀಕ್ಷೇತ್ರ ಬಂಗಾರಮಕ್ಕಿಯ ಶ್ರೀಮಾರುತಿ ರೆಸಿಡೆನ್ಸಿಯಲ್ ಸ್ಕೂಲ್‌ನ 10ನೇ ತರಗತಿಯ ವಿದ್ಯಾರ್ಥಿಗಳು ಸತತ 8ನೇ ವರ್ಷ 100% ಫಲಿತಾಂಶದ ಸಾಧನೆ ಮಾಡಿದ್ದಾರೆ.

ಸಿಬಿಎಸ್‌ಇಯು 2022-23ನೇ ಸಾಲಿನ 10ನೇ ತರಗತಿಯ ಫಲಿತಾಂಶ ಪ್ರಕಟಿಸಿದ್ದು, ಪರೀಕ್ಷೆ ಎದುರಿಸಿದ ಎಲ್ಲಾ 35 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇವರಲ್ಲಿ 14 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ನೇಹಾ 94.4% ಫಲಿತಾಂಶದೊಂದಿಗೆ ಶಾಲೆಗೆ ಪ್ರಥಮ ಸ್ಥಾನ, ಶ್ರೀಶ ಹೆಗಡೆ 93.4% ಫಲಿತಾಂಶದೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ತೇಜಸ್ವಿ ಹೆಗಡೆ 92% ಫಲಿತಾಂಶದೊಂದಿಗೆ ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ. ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿ ವರ್ಗದವರಿಗೆ ಶಾಲಾ ಆಡಳಿತ ಮಂಡಳಿಯು ಪ್ರಶಂಸೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದೆ.

300x250 AD
Share This
300x250 AD
300x250 AD
300x250 AD
Back to top