ಹೊನ್ನಾವರ: 2022-2023ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಎಂ.ಪಿ.ಇ. ಸೊಸೈಟಿಯ ಕೇಂದ್ರೀಯ ವಿದ್ಯಾಲಯ ಶೇ.100ರಷ್ಟು ಫಲಿತಾಂಶವನ್ನು ಪಡೆಯುವ ಮೂಲಕ ವಿನೂತನ ಸಾಧನೆಯನ್ನು ಮಾಡಿದೆ.
ಕಳೆದ 6 ವರ್ಷಗಳಿಂದ ಸತತ ಶೇ 100ರಷ್ಟು ಫಲಿತಾಂಶವನ್ನು ಪಡೆದ ಹೆಗ್ಗಳಿಕೆ ಕೇಂದ್ರೀಯ ವಿದ್ಯಾಲಯದ್ದಾಗಿದೆ. 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟೂ 21 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 12 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ದೇವಾಚಲ್ ಶಾನಭಾಗ್ ಶೇ 90.8ರಷ್ಟು ಅಂಕ ಪಡೆದು ಪ್ರಥಮ ಸ್ಥಾನ, ಚಿನ್ಮಯ್ ಹೆಗಡೆ ಶೇ 90.2ರಷ್ಟು ಅಂಕ ಪಡೆದು ದ್ವಿತೀಯ ಹಾಗೂ ರೋಹಿತ್ ದೇಸಾಯಿ ಶೇ 87.8ರಷ್ಟು ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಶುಭಾಶಯವನ್ನು ಕೋರಿದ್ದಾರೆ.