ಕಾರವಾರ: ವಿಧಾನಸಭಾ ಚುನಾವಣಾ ಫಲಿತಾಂಶಗಳು ಹೊರಬಿದ್ದಿದ್ದು ಜಿಲ್ಲೆಯಲ್ಲಿ ಕಾಂಗ್ರೆಸ್ 4, ಬಿಜೆಪಿ 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ.
ಅಂಕೋಲಾ- ಕಾರವಾರ ಕ್ಷೇತ್ರದಲ್ಲಿ ಬಿಜೆಪಿ 73890 ಮತಗಳು, ಕಾಂಗ್ರೆಸ್ 76305 ಮತಗಳು, ಜೆಡಿಎಸ್ 2864 ಮತಗಳನ್ನು ಪಡೆದಿದ್ದು, 2415 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಗೆಲುವಿನ ನಗೆ ಬೀರಿದ್ದಾರೆ.
ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ 99603 ಮತಗಳನ್ನು ಪಡೆದು 32657 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಹಾಗೆಯೇ ಬಿಜೆಪಿ 66946 ಮತಗಳು, ಜೆಡಿಎಸ್ 1462 ಮತಗಳನ್ನು ಪಡೆದಿವೆ.
ಶಿರಸಿ-ಸಿದ್ದಾಪುರ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ನಡೆದಿದ್ದು ಕೊನೆ ಹಂತದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿ ಗೆಲುವಿನ ನಗೆ ಬೀರಿದೆ.
ಬಿಜೆಪಿ 66954 ಮತಗಳು, ಜೆಡಿಎಸ್ 8988 ಮತಗಳನ್ನು ಪಡೆದಿವೆ. ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ 76021 ಮತಗಳನ್ನು ಪಡೆದಿದ್ದು, 9067 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ 73952 ಮತಗಳನ್ನು ಪಡೆದು 3759 ಮತಗಳ ಅಂತರದಿಂದ ಗೆದ್ದಿದ್ದಾರೆ. ಅಂತೆಯೇ ಕಾಂಗ್ರೆಸ್ 70193 ಮತಗಳು, ಜೆಡಿಎಸ್ 1630 ಮತಗಳನ್ನು ಪಡೆದಿದೆ.
ಹಳಿಯಾಳ ಕ್ಷೇತ್ರದಲ್ಲಿ ಬಿಜೆಪಿ 53328, ಜೆಡಿಎಸ್- 28682 ಮತಗಳನ್ನು ಪಡೆದಿದ್ದು ಕಾಂಗ್ರೆಸ್ ಅಭ್ಯರ್ಥಿ ಆರ್.ವಿ.ದೇಶಪಾಂಡೆ 56912 ಮತಗಳನ್ನು ಪಡೆದಿದ್ದು 3584 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕುಮಟಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ 58583 ಮತಗಳನ್ನು ಪಡೆದು, 57960 ಮತಗಳನ್ನು ಪಡೆದ ಜೆಡಿಎಸ್ ಅಭ್ಯರ್ಥಿ ವಿರುದ್ಧ ಜಯ ಸಾಧಿಸಿದ್ದಾರೆ.