ಮುಂಡಗೋಡ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದುಡಿಯುವ ಕೈಗಳಿಗೆ ಉದ್ಯೋಗ ನೀಡುವ ಸಲುವಾಗಿ ಮನೆ ಮನೆಗೆ ಭೇಟಿ ನೀಡುವ ಮೂಲಕ ಕೂಲಿಕಾರರಿಗೆ ಕೆಲಸಕ್ಕೆ ಬರುವಂತೆ ಮನವಿ ಮಾಡಲಾಯಿತು.
ಶುಕ್ರವಾರ ತಾಲೂಕಿನ ಕಾತೂರು ಗ್ರಾಮ ಪಂಚಾಯತ್ ನ ಆಲಳ್ಳಿ ಹಾಗೂ ಮೂಡಸಾಲಿ ಗ್ರಾಮದಲ್ಲಿ ಕೂಲಿಕಾರರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕೂಲಿಕಾರರ ಮನೆಗಳಿಗೆ ಭೇಟಿ ನೀಡಿ ಯೋಜನೆಯ ಸದುಪಯೋಗ ಪಡೆಯುವಂತೆ ತಾಲೂಕು ತಾಂತ್ರಿಕ ಸಂಯೋಜಕರಾದ ಅಲೋಕ ಹಾಗು ಐಇಸಿ ಸಂಯೋಜಕರಾದ ಪೂರ್ಣಿಮಾ ಗೌಡ ನರೇಗಾ ಯೋಜನೆಯ ಕರಪತ್ರ ನೀಡುವ ಮೂಲಕ ಕೆಲಸಕ್ಕೆ ಬರುವಂತೆ ತಿಳಿಸಿದರು.
ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನರೇಗಾದಡಿ ಕೆರೆ, ಕಾಲುವೆ, ಇಂಗು ಹೊಂಡ, ರಸ್ತೆಗಳ ದುರಸ್ತಿ ಕಾಮಗಾರಿಗಳು ಹಾಗೂ ಇನ್ನಿತರ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಂಡು ಗ್ರಾಮದ ಅಭಿವೃದ್ಧಿಯ ಜೊತೆಗೆ ದುಡಿದು ಉಣ್ಣುವ ಕೈಗಳಿಗೆ ಆಸರೆಯಾಗಿರುವ ಕೆಲಸಗಳಿಗೆ ಪ್ರಾಧಾನ್ಯತೆ ನೀಡಿ ಎಂದರು.
ಇನ್ನು ಈ ವೇಳೆ ಪ್ರಸ್ತುತ ಆರ್ಥಿಕ ವರ್ಷದ ಕ್ರಿಯಾಯೋಜನೆಯಲ್ಲಿ ಆದ್ಯತೆ ನೀಡಲಾದ ಸಾರ್ವಜನಿಕ ಹಾಗೂ ವೈಯಕ್ತಿಕ ಕಾಮಗಾರಿಗಳ ಮಾಹಿತಿಯನ್ನು ಗ್ರಾಮ ಪಂಚಾಯತ್‌ದಲ್ಲಿ ಪಡೆಯುವಂತೆ ಫಲಾನುಭವಿಗಳಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಎಸ್‌ಡಿಎ ಬಸವರಾಜ್ ವಡ್ಡರ್, ಬಿಎಪ್‌ಟಿ ಉಷಾ ಹಾನಗಲ್ ಹಾಜರಿದ್ದರು.