ನವದೆಹಲಿ: ನಿರೀಕ್ಷೆಯಂತೆ ಕಾಂಗ್ರೆಸ್ ಮತ್ತು ಇತರ 18 ವಿರೋಧ ಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿವೆ. ಮೇ. 28 ರಂದು ನಡೆಯಲಿರುವ ಉದ್ಘಾಟನೆಯನ್ನು ಬಹಿಷ್ಕರಿಸುವುದಾಗಿ ಈ ಎಲ್ಲಾ ವಿರೋಧ ಪಕ್ಷಗಳು ಬುಧವಾರ ಜಂಟಿ ಹೇಳಿಕೆ ನೀಡಿವೆ.
ಪ್ರಧಾನಿ ಮೋದಿ ನೂತನ ಸಂಸತ್ ಭವನವನ್ನು ಉದ್ಘಾಟನೆ ಮಾಡಲಿದ್ದು, ರಾಷ್ಟ್ರಪತಿಗಳು ಸಂಸತ್ ಭವನವನ್ನು ಉದ್ಘಾಟನೆ ಮಾಡದೇ ಇರುವುದನ್ನು ವಿಪಕ್ಷಗಳು ರಾಷ್ಟ್ರಪತಿಗಳ ಹುದ್ದೆಗೆ ಮಾಡಿದ ಅವಮಾನ ಎಂದು ಆರೋಪಿಸಿವೆ.
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ, ಜನತಾ ದಳ (ಯುನೈಟೆಡ್), ಆಮ್ ಆದ್ಮಿ ಪಕ್ಷ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ, ಶಿವಸೇನೆ (UBT), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ), ಸಮಾಜವಾದಿ ಪಕ್ಷ, ರಾಷ್ಟ್ರೀಯ ಜನತಾ ದಳ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಜಾರ್ಖಂಡ್ ಮುಕ್ತಿ ಮೋರ್ಚಾ, ರಾಷ್ಟ್ರೀಯ ಸಮ್ಮೇಳನ, ಕೇರಳ ಕಾಂಗ್ರೆಸ್, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ವಿದುತಲೈ ಚಿರುತೈಗಲ್ ಕಚ್ಚಿ, ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ರಾಷ್ಟ್ರೀಯ ಲೋಕದಳ ಪಕ್ಷಗಳು ನೂತನ ಸಂಸತ್ತಿನ ಉದ್ಘಾಟನೆ ಬಹಿಷ್ಕರಿಸುವುದಾಗಿ ಹೇಳಿವೆ.