ಹೊನ್ನಾವರ: ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ 2021ರ ಮುಂಗಾರು ಹಂಗಾಮಿನಿನಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಮೊದಲನೆ ಬಾರಿ ಬೆಳೆ ಸಮೀಕ್ಷೆಯ ದತ್ತಾಂಶವನ್ನು ಬೆಳೆ ನೋಂದಾವಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಅಂತಿಮವಾಗಿ ಸಂಸ್ಥೆಯವರು ತಿರಸ್ಕರಿಸಿದ ಯಾದಿಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಿ ಹಾಗೂ ರೈತ ಸಂಪರ್ಕ ಕೇಂದ್ರಗಳ ಸೂಚನಾ ಫಲಕದಲ್ಲಿ ಲಗತ್ತಿಸಲಾಗಿದೆ.
ರೈತರು ಅವರ ವಿಮೆ ತಿರಸ್ಕೃತಗೊಂಡ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ತಿರಸ್ಕೃತ ಪರಿಶೀಲನೆಗಾಗಿ ಮರು ಅರ್ಜಿಯನ್ನು ಜೂನ್. 15 ರೊಳಗೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕರು, ಹೊನ್ನಾವರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.