ಜೊಯಿಡಾ: ತಾಲೂಕಿನ ಅನಮೋಡ ಅಬಕಾರಿ ತನಿಖಾ ಠಾಣೆಯ ಮುಂಭಾಗದಲ್ಲಿ ಬುಲೆರೋ ಪಿಕ್ಅಪ್ ವಾಹನದಲ್ಲಿ ಸಾಗಿಸುತ್ತಿದ್ದ 19 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ದಾವಣಗೆರೆ ಜಿಲ್ಲೆಯ ಚಿಕ್ಕಕೊಗಲೂರು ನಿವಾಸಿ ಲಕ್ಷ್ಮೀಪತಿ ಆರ್. ಎಂಬುವನನ್ನು ಬಂಧಿಸಿದ್ದು, ವಾಹನ ಮಾಲೀಕನನ್ನು ಪತ್ತೆ ಹಚ್ಚಬೇಕಾಗಿದೆ. ವಶಪಡಿಸಿಕೊಂಡ ಮದ್ಯ ಹಾಗೂ ವಾಹನದ ಅಂದಾಜು ಮೌಲ್ಯ 8,33,440 ರೂ.ಗಳಾಗಿವೆ.
ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು ಹಾಗೂ ಉತ್ತರ ಕನ್ನಡ ಜಿಲ್ಲೆ ಅಬಕಾರಿ ಉಪ ಆಯುಕ್ತ ಜಗದೀಶ ಎನ್.ಕೆ. ಅವರ ನಿರ್ದೇಶನ ಮತ್ತು ಯಲ್ಲಾಪುರ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ ಶಂಕರಗೌಡ ಪಾಟೀಲ ಮಾರ್ಗದರ್ಶನದಲ್ಲಿ ಈ ದಾಳಿ ನಡೆಸಲಾಗಿದೆ.
ಅಬಕಾರಿ ದಾಳಿಯಲ್ಲಿ ಅಬಕಾರಿ ಉಪನಿರೀಕ್ಷಕ ಬಿ. ಮಲ್ಲಣ್ಣವರ, ಪೇದೆಗಳಾದ ಎಸ್.ಬಿ.ಬನ್ಸೋಡೆ, ಎಸ್.ಡಿ.ರಾಠೋಡ, ಯು.ಎನ್.ತುಳಜಿ ಅಬಕಾರಿ ಪಾಲ್ಗೊಂಡಿದ್ದರು. ಅಬಕಾರಿ ಉಪನಿರೀಕ್ಷಕ ಟಿ.ಬಿ.ಮಲ್ಲಣ್ಣವರ ಗುರುವಾರವೇ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದು, ಮೊದಲ ದಿನವೇ ಅಕ್ರಮ ಮದ್ಯ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.