ದಾಂಡೇಲಿ: 9ನೇ ಬಾರಿಗೆ ವಿಧಾನ ಸಭೆಗೆ ಆಯ್ಕೆಯಾದ ಹಿನ್ನಲೆಯಲ್ಲಿ ಶಾಸಕ ಆರ್.ವಿ.ದೇಶಪಾಂಡೆಯವರನ್ನು ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಹಾಗೂ ಪಕ್ಷದ ವಿವಿಧ ಸೆಲ್ಗಳ ನೇತೃತ್ವದಲ್ಲಿ ನಗರದ ಹಳಿಯಾಳ ರಸ್ತೆಯ 3ನಂ ಗೇಟ್ ನಿಂದ ಬೈಕ್ ರ್ಯಾಲಿ ಮೂಲಕ ದಾಂಡೇಲಿ ನಗರಕ್ಕೆ ಬರಮಾಡಿಕೊಳ್ಳಲಾಯಿತು.
3ನಂ ಗೇಟ್ ನಿಂದ ಆರಂಭವಾದ ಬೈಕ್ ರ್ಯಾಲಿಯು ನಗರದ ಹಳಿಯಾಳ ರಸ್ತೆ, ಕೆ.ಸಿ.ವೃತ್ತ, ಪಟೇಲ್ ವೃತ್ತ, ಜೆ.ಎನ್.ರಸ್ತೆ, ಸೋಮಾನಿ ವೃತ್ತ ದಾಟಿ ಕೊನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸಂಪೊನ್ನಗೊಂಡಿತು. ಮೆರವಣಿಗೆಯ ಉದ್ದಕ್ಕೂ ಪಟಾಕಿ ಸಿಡಿಸಿ, ಪರಸ್ಪರ ಬಣ್ಣ ಎರಚಿ ಸಂಭ್ರಮಿಸಲಾಯಿತು. ಇನ್ನೂ ಮೆರವಣಿಗೆಯಲ್ಲಿ ಬ್ಯಾಂಡ್ ಸೆಟ್ ಎಲ್ಲರ ಗಮನ ಸೆಳೆಯಿತು.