ಕುಮಟಾ: ಕ್ರೀಡೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿ ಎಂದು ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಪ್ರೀತಿ ಭಂಡಾರ್ಕರ್ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2022- 23ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಿಜಯ ನಾಯ್ಕ್, ವಿದ್ಯಾರ್ಥಿಗಳು ಕ್ರೀಡಾಕೂಟದ ಸದುಪಯೋಗ ಪಡೆದುಕೊಂಡು ತಮ್ಮ ದೈಹಿಕ ಹಾಗೂ ಮಾನಸಿಕ ಶರೀರವನ್ನು ಸಮತೋಲನದಲ್ಲಿಟ್ಟುಕೊಳ್ಳಬೇಕು ಎಂದು ನುಡಿದರು.
ದೈಹಿಕ ಶಿಕ್ಷಣ ನಿರ್ದೇಶಕಿ ಶಾರದಮ್ಮ ಬಿ. ಪ್ರತಿಜ್ಞಾ ವಿಧಿ ಬೋಧಿಸಿದರು. ಕನ್ನಡ ಉಪನ್ಯಾಸಕ ಮೂರ್ತಿ ಐ.ಆರ್. ಸ್ವಾಗತಿಸಿದರು. ಗಿರೀಶ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು. ಯೋಗೇಶ್ ಪಟಗಾರ್ ನಿರ್ಣಯಕರಾಗಿ ಸಹಕರಿಸಿದರು.
ವೇದಿಕೆ ಮೇಲೆ ಪ್ರೊ.ಐ.ಕೆ.ನಾಯ್ಕ್. ಪ್ರೊ.ವಿ.ಎಮ್.ನಾಯಕ. ಪ್ರೊ.ಗೀತಾ ನಾಯಕ, ವಿದ್ಯಾರ್ಥಿ ಯೂನಿಯನ್ ಪ್ರತಿನಿಧಿಗಳು ಹಾಗೂ ಕ್ರೀಡಾ ಪ್ರತಿನಿಧಿಗಳು ಉಪಸ್ಥಿರಿದ್ದು ಕಾರ್ಯಕ್ರಮಕ್ಕೆ ಶೋಭೆ ತಂದರು. ಉಪನ್ಯಾಸಕರು, ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಂಡರು.