ದಾಂಡೇಲಿ: ನಗರದ ಲಯನ್ಸ್ ಅಂತರಾಷ್ಟ್ರೀಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಲಯನ್ಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಯು.ಎಸ್.ಪಾಟೀಲ್ ಅವರು ಶಾಲೆಯ ಆವರಣದಲ್ಲಿ ಗಿಡ ನೆಟ್ಟು ವಿಶ್ವ ಪರಿಸರ ದಿನಾಚರಣೆಗೆ ಚಾಲನೆಯನ್ನು ನೀಡಿ, ಪರಿಸರ ನಮ್ಮೆಲ್ಲರ ಜೀವನದ ಭಾಗ ಎನ್ನುವುದನ್ನು ಎಲ್ಲರು ಅರಿತು ಪರಿಸರ ಸಂರಕ್ಷಣೆಗೆ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯನಿ, ಶಾಲೆಯ ಶಿಕ್ಷಕ-ಶಿಕ್ಷಕಿಯರು ಮತ್ತು ಶಾಲೆಯ ವಿದ್ಯಾರ್ಥಿಗಳು, ಗುತ್ತಿಗೆದಾರ ಮೆಹಬೂಬ ಶೇಖ ಮೊದಲಾದವರು ಉಪಸ್ಥಿತರಿದ್ದರು.