ಕುಮಟಾ: ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣದೊಂದಿಗೆ ಔದ್ಯೋಗಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಪ್ರಗತಿ ಪೋಷಕ ಸಂಸ್ಥೆಯ ದೇವೇಂದ್ರ ಎನ್. ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಜರುಗಿದ ಔದ್ಯೋಗಿಕ ಕೌಶಲ್ಯಗಳ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಪಠ್ಯ ಶಿಕ್ಷಣದೊಂದಿಗೆ ಸಂವಹನ ಕಲೆ,ನಿರ್ಣಯ ತೆಗೆದುಕೊಳ್ಳುವ ಸಾಮರ್ಥ್ಯ,ಸಮಯ ನಿರ್ವಹಣಾ ಸಾಮರ್ಥ್ಯ ಇವುಗಳನ್ನು ರೂಡಿಸಿಕೊಳ್ಳಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಿಜಯಾ ಡಿ.ನಾಯ್ಕ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ಅಣಿಗೊಳಿಸಿಕೊಳ್ಳ ಬೇಕಾದುದು ಇಂದಿನ ಅಗತ್ಯವೆಂದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ಗೀತಾ ನಾಯಕ ಪ್ರಾಸ್ತಾವಿಕ ಮಾತನಾಡಿದರು.
ವಿಭಾಗದ ಉಪನ್ಯಾಸಕರಾದ ಶ್ರೀಕಾಂತ ನಾಯ್ಕ, ಡಾ.ಮುರಳಿಮೋಹನ ಸಿ., ಗಣೇಶ್ ಕೆ.ಎಸ್., ದಿಲೀಪ್ ನಾಯ್ಕ, ಈಶ್ವರ ಗೌಡ, ಶರಾವತಿ ಹೆಗಡೆ, ಕಾಂತರಾಜ ಮೊಗೇರ್, ವೀಣಾ ಗೌಡ, ಆಶಾ ಭಟ್ ಹಾಜರಿದ್ದರು. ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.