Slide
Slide
Slide
previous arrow
next arrow

ರಾಜ್ಯದ ಹಲವೆಡೆ ನೀರಿನ ಅಭಾವ: ಅಗತ್ಯ ಕ್ರಮಕ್ಕೆ ಸೂಚನೆ

300x250 AD

ಕಾರವಾರ: ರಾಜ್ಯದ ಹಲವೆಡೆ ಕುಡಿಯುವ ನೀರಿನ ಅಭಾವದ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು, ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು. ಕಳೆದ ವಾರವೇ ನೀಡಿರುವ ಸೂಚನೆ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳನ್ನು ಪರಿಣಾಮಕಾರಿ ರೀತಿಯಲ್ಲಿ ಮಾಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂಬ0ಧ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದೇ ವೇಳೆ ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿರುವ ಕುರಿತಂತೆಯೂ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

300x250 AD
Share This
300x250 AD
300x250 AD
300x250 AD
Back to top