Slide
Slide
Slide
previous arrow
next arrow

ಶಾಲಾ ಪಠ್ಯಪುಸ್ತಕದಲ್ಲಿರುವ ಸೂಲಿಬೆಲೆ ಅಧ್ಯಾಯ ಕಡಿತ: ಪ್ರಿಯಾಂಕ್ ಖರ್ಗೆ

300x250 AD

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿದ್ದು, ಚಕ್ರವರ್ತಿ ಸೂಲಿಬೆಲೆ ಬರೆದಿರುವ ಅಧ್ಯಾಯವನ್ನು ತೆಗೆಯುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವಾಟ್ಸಪ್ ಯೂನಿವರ್ಸಿಟಿಯಲ್ಲಿ ಓದಿರುವವರೆಲ್ಲಾ ಪಠ್ಯ ರಚನೆ ಮಾಡಲು ಪ್ರಾರಂಭಿಸಿದ್ದಾರೆ. ಅಂತಹ ಪಾಠ ನಮ್ಮ ಮಕ್ಕಳು ಕಲಿತರೆ ನಮ್ಮ ಮಕ್ಕಳ ಭವಿಷ್ಯ ಏನಾಗಬೇಕು? ಕನ್ನಡ ಸಾಹಿತ್ಯಕ್ಕೆ ಅಷ್ಟು ಬರ ಬಂದಿದೆಯಾ? ಎಂದು ಕಿಡಿಕಾರಿದ್ದಾರೆ.
ನಾನು ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ಓದಿಲ್ಲ. ಆದರೂ ಅವರು ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ. ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಪಾಠ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ? ಬಾಡಿಗೆ ಭಾಷಣಕಾರರನ್ನೆಲ್ಲ ನೀವು ಲೇಖಕರು, ಸಾಹಿತಿಗಳು ಮಾಡಿದ್ದೀರಿ. ಅದನ್ನು ನಮ್ಮ ಮಕ್ಕಳು ಓದಬೇಕಾ? ಎಂದು ಪ್ರಶ್ನಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top