ಕಾರವಾರ: ಸರ್ಕಾರವು ಪ್ರಸ್ತುತ ಹೊಸದಾಗಿ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದ್ದು, ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಯಾವುದೇ ನಿಗದಿತವಾದ ನಮೂನೆಯಗಲಿ, ಅಧಿಕೃತವಾದ ಆ್ಯಪ್ ಆಗಲೀ ಪ್ರಾರಂಭವಾಗಿರುವುದಿಲ್ಲ. ಸಾರ್ವಜನಿಕರಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.