ಕುಮಟಾ: ಡ್ರಗ್ಸ್ ಮತ್ತು ಗಾಂಜಾ ಸೇವನೆಯಂತಹ ದುಶ್ಚಟಗಳಿಗೆ ಇಂದಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದಾರೆ. ಇವುಗಳಿಂದ ದೂರವಿದ್ದು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಹೇಳಿದರು.
ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಜರುಗಿದ ಮಾದಕ ದ್ರವ್ಯ ವಿರೋಧಿ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು..
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿಜಯಾ ಡಿ.ನಾಯ್ಕ ಮಾತನಾಡಿ, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸರಬರಾಜು ಮಾಡುವ ಜಾಲವನ್ನು ಪೋಲೀಸ್ ವ್ಯವಸ್ಥೆ ಆಗಾಗ ಹಿಡಿದು ಕಾನೂನು ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತದೆ. ಮಾದಕ ದ್ರವ್ಯ ವ್ಯಾಪಾರ ಅತ್ಯಂತ ಅಪಾಯಕಾರಿ ಹಾಗೂ ಕಾನೂನು ವಿರೋಧಿ ಕೃತ್ಯವಾಗಿದೆ. ಈ ವ್ಯವಸ್ಥೆಗೆ ಕಡಿವಾಣ ಹಾಕಲು ಸಮಾಜದ ಸಹಕಾರ ಸಹ ಮುಖ್ಯ ಎಂದರು. ವಿದ್ಯಾರ್ಥಿಗಳು ಉತ್ತಮ ಹವ್ಯಾಸವನ್ನು ಬೆಳೆಸಿಕೊಂಡು, ಉತ್ತಮ ಬದುಕನ್ನು ರೂಪಿಸಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಸಾಂಸ್ಕೃತಿಕ ವಿಭಾಗದ ಸಂಚಾಲಕರಾದ ಮೂರ್ತಿ ಐ.ಆರ್., ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ನಾಗರಾಜ ಬಿ., ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪಲ್ಲವಿ ಕಿರಣ ಹಾಗೂ ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಜರಿದ್ದರು.