Slide
Slide
Slide
previous arrow
next arrow

ಮಕ್ಕಳನ್ನು ಜಾಗೃತರನ್ನಾಗಿಸಲು ದೌರ್ಜನ್ಯ ತಡೆ, ಪೋಕ್ಸೋ ಅರಿವು ಮೂಡಿಸಿ: ಡಿಸಿ ಕವಳಿಕಟ್ಟಿ

300x250 AD

ಕಾರವಾರ: ಪ್ರತಿಯೊಂದು ತಾಲೂಕಿನಲ್ಲಿ ದೌರ್ಜನ್ಯ ತಡೆ ಮತ್ತು ಪೋಕ್ಸೋ ಪ್ರಕರಣಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಮಕ್ಕಳನ್ನು ಜಾಗೃರತರನ್ನಾಗಿ ಮಾಡಲು ಸಂಬ0ಧಪಟ್ಟ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

ನಗರದ ಜಿಲ್ಲಾ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲಾ ಕಾಲೇಜ್ ಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳು ಮಕ್ಕಳಿಗೆ ಅವಶ್ಯಕವಿರುವ ಎಲ್ಲಾ ಕಾರ್ಯಕ್ರಮಗಳನ್ನು ಮಾಡುವುದು ಮತ್ತು ಮಕ್ಕಳ್ ಜೊತೆಗೆ ಅವರ ಪಾಲಕರನ್ನು ಸಹ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಿ ಅವರಲ್ಲೂ ಜಾಗೃತಿ ಮೂಡಿಸುವುದು ಅವಶ್ಯಕತೆ ಇದೆ. ಮಕ್ಕಳಿಗೆ ಸಂಬOಧಪಟ್ಟ ಇಲಾಖೆಯ ಅಧಿಕಾರಿಗಳು ಬೇಜವಾಬ್ದಾರಿ ಮಾಡದೇ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಗ್ರಾಮೀಣ ಪ್ರದೇಶಗಳ ಜನರಲ್ಲಿ ಬಯಲು ಸೌಚಾಲಯದಿಂದ ಆಗುವ ತೊಂದರೆಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಹಾಗೆಯೇ ಸೌಚಾಲಯಗಳ ಉಪಯೋಗ ಪಡೆದುಕೊಳ್ಳುತ್ತಾರೆ ಇಲ್ಲೊವೋ ಎಂಬುವುದನ್ನು ಪರಿಶೀಲಿಸಿ ವರದಿ ನೀಡಲು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಳಿಗೆ ಮಾರ್ಗದರ್ಶನ ಮಾಡಿದರು. ಸರ್ಕಾರದಿಂದ ಬರುವ ಯೋಜನೆಗಳು, ಸೌಲಭ್ಯಗಳು ಅರ್ಹ ಪಲಾನುಭವಿಗಳಿಗೆ ನೀಡಬೇಕು ಎಂದರು. ಹಾಗೆಯೇ ನಗರ ಸಭೆಯ ಪೌರಕಾರ್ಮಿಕರ ಆಗುತ್ತಿರುವ ದೌರ್ಜನ್ಯದ ಬಗ್ಗೆ ಆಲಿಸಿ ಪೌರಕಾರ್ಮಿಕರಿಗೆ ಸರಿಯಾದ ಸಮಯದಲ್ಲಿ ವೇತನ, ಗೌರವಧನ, ಉಪಹಾರ, ಸುರಕ್ಷೆ ಕಿಟ್, ಪೂರೈಸಲು ಸೂಚಿಸಿದರು.

300x250 AD

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಪೊಲೀಸ್ ವರಿಷ್ಠಾಧಿಕಾರಿ, ಸರ್ಕಾರಿ ವಕೀಲರು, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಹನುಮಂತಪ್ಪ ನಿಟ್ಟೂರು, ರಾಜ್ಯ ಕಾರ್ಯದರ್ಶಿ ಯಮುನಾ ಗಾಂವಕರ್, ಸಹ್ಯಾದ್ರಿ ಸಮುದಾಯ ಅಭಿವೃದ್ಧಿ ಮತ್ತು ಸಶಕ್ತಿಕಿರಣ ಸಂಸ್ಥೆ ವೆಂಕಟೇಶ ನಾಯ್ಕ, ಇತರರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top