Slide
Slide
Slide
previous arrow
next arrow

ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಎಸ್‌ಎಫ್‌ಐ ಆಗ್ರಹ

300x250 AD

ಕಾರವಾರ: ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ರಾಜ್ಯ ಸಮಿತಿಯ ನಿಯೋಗ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಗೆ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಮನವಿ ಸಲ್ಲಿಸಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರವು ತನ್ನ ಅವಧಿಯಲ್ಲಿ ಪಠ್ಯ ಪರಿಷ್ಕರಣೆಯ ಮೂಲಕ ಶಿಕ್ಷಣವನ್ನು ಕೇಸರಿಕರಣ ಮಾಡಲು ಕೆಲವು ಪಾಠಗಳನ್ನು ಬದಲಾವಣೆ ಮಾಡಿದ್ದು, ಅಧಿಕಾರಕ್ಕೆ ಬಂದ ನಂತರ ಕೇಸರೀಕರಣ ಮಾಡಿದ ಪಾಠಗಳನ್ನು ಕೈಬಿಟ್ಟು ವಿದ್ಯಾರ್ಥಿಗಳಿಗೆ ಬೇಕಾಗುವ ಹಾಗೂ ನಾಡಿನ ಸೌಹಾರ್ದತೆ ಹಾಗೂ ಸಹೋದರತ್ವವನ್ನು ಬೆಳೆಸುವಂತಹ ಪಾಠಗಳನ್ನು ಸೇರ್ಪಡೆ ಮಾಡಿರುವುದಕ್ಕೆ ಸಚಿವರನ್ನು ಹಾಗೂ ಸರ್ಕಾರವನ್ನು ಎಸ್‌ಎಫ್‌ಐ ಅಭಿನಂದಿಸಿತು.

300x250 AD

ರಾಜ್ಯದಲ್ಲಿ ಅನೇಕ ಸರಕಾರಿ ಶಾಲಾ ಕಾಲೇಜುಗಳಲ್ಲಿ ಈಗಲೂ ಅನೇಕ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ರಾಜ್ಯದ ಗ್ರಾಮೀಣ ಪ್ರದೇಶ, ಕೊಳಚೆ ಪ್ರದೇಶಗಳು, ಬುಡಕಟ್ಟು ಪ್ರದೇಶಗಳಲ್ಲಿ ಇರುವಂತಹ ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗದೇ ಇರುವುದು ಒಂದು ಕಡೆಯಾದರೆ, ಕೊರೋನಾ ಮತ್ತು ಕೊರೋನಾ ನಂತರದಲ್ಲಿ ಶೈಕ್ಷಣಿಕ ರಂಗದಲ್ಲಿ ಸಾಕಷ್ಟು ಸಮಸ್ಯೆಗಳನ್ನು ವಿದ್ಯಾರ್ಥಿಗಳು ದಿನನಿತ್ಯ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದೆ.
ಬೇಡಿಕೆಗಳು: ಕಳೆದ 4 ವರ್ಷಗಳಿಂದ 8 ನೇಯ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸದೇ ಹಿಂದಿನ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದ್ದು, ಈ ವರ್ಷದಿಂದ ಸೈಕಲ್ ವಿತರಿಸಲು ಸರ್ಕಾರ ಕ್ರಮವಹಿಸಬೇಕು. ಡೊನೇಶನ್ ಹಾವಳಿ ನಿಯಂತ್ರಣ ಮಾಡಲು ಜಿಲ್ಲಾಧಿಕಾರಿಗಳ ಅದ್ಯಕ್ಷತೆಯಲ್ಲಿರುವ ಡೇರಾ ಸಮಿತಿಯನ್ನು ಸಕ್ರಿಯಗೊಳಿಸಿ ಎಲ್ಲಾ ಜಿಲ್ಲೆಗಳಲ್ಲಿ ಸಭೆ ಮಾಡಲು ಸೂಚನೆ ನೀಡಿ ಡೊನೇಶನ್ ಹಾವಳಿಯನ್ನು ನಿಲ್ಲಿಸಬೇಕು. ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಮೂಲಭೂತ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು, ಶೌಚಾಲಯಗಳು, ವಿದ್ಯಾರ್ಥಿಗಳ ಡೆಸ್ಕ್ಗಳನ್ನ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ.
ಸ್ವಂತ ಕಟ್ಟಡಗಳು, ಈಗಾಗಲೇ ಇರುವ ಕಟ್ಟಡಗಳ ಇರುವ ಕಟ್ಟಡಗಳ ದುರಸ್ತಿ, ಗ್ರಂಥಾಲಯ ಕೊಠಡಿ, ಭೋಜನಾಲಯ ಕೊಠಡಿ ಹಾಗೂ ಎಲ್ಲಾ ಶಾಲಾ-ಕಾಲೇಜುಗಳಿಗೆ ಕಂಪೌಂಡ್ ವ್ಯವಸ್ಥೆಯನ್ನು ಖಾತ್ರಿ ಪಡಿಸಬೇಕು. ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಹಂತದ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಬೇಕು. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ‘ಡಿ’ ಗ್ರೂಪ್ ಹುದ್ದೆಗಳು ಹಾಗೂ ರಂಗ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡಬೇಕು. ಕೊರೋನಾ ಸಮಯದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ಶಾಲೆಗೆ ಕರೆದುಕೊಂಡು ಬರುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಸರ್ಕಾರಿ ಶಾಲೆಗಳನ್ನು ಕಿರಿಯ ಪ್ರಾಥಮಿಕದಿಂದ ಹಿರಿಯ ಪ್ರಾಥಮಿಕಕ್ಕೆ ಮೇಲ್ದರ್ಜೆಗೆ ಏರಿಸಲು ಇರುವ ಸಮಸ್ಯೆಗಳನ್ನು ಪರಿಹರಿಸಬೇಕು. ಆರ್.ಟಿ.ಇ ನಿಯಮಗಳನ್ನು ಎಲ್ಲಾ ಶಾಲೆಗಳಲ್ಲಿ ಸಮರ್ಪಕವಾಗಿ ಜಾರಿಗೊಳಿಸಲು ಆದೇಶ ಮಾಡಬೇಕು. ಸರ್ಕಾರಿ ನಿಯಮಗಳನ್ನು ಉಲ್ಲಂಘನೆ ಮಾಡಿ ಬಹುತೇಕ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ನೋಟ್‌ಬುಕ್, ಬಟ್ಟೆ ಮಾರಾಟ ಮಾಡುವಂತಹ ಶಾಲೆಗಳ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು. ರಾಜ್ಯದಲ್ಲಿ ಅನಧಿಕೃತವಾಗಿವಾಗಿರುವ ಐಸಿಎಸ್‌ಇ ಹಾಗೂ ಸಿಬಿಎಸ್‌ಇ ಶಾಲೆಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂಉದು ಬೇಡಿಕೆಗಳನ್ನು ಸಲ್ಲಿಸಲಾಗಿದೆ. ಮನವಿಗೆ ಸ್ಪಂದಿಸಿದ ಸಚಿವರು, ಸಮಸ್ಯೆಗಳ ಕುರಿತು ಚರ್ಚಿಸಲು ಅಧಿಕಾರಿಗಳನ್ನು ಕರೆದು ಎಸ್‌ಎಫ್‌ಐನೊಂದಿಗೆ ಸಭೆ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಅಮರೇಶ ಕಡಗದ, ರಾಜ್ಯ ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಹಾಳ, ರಾಜ್ಯ ಪಧಾದಿಕಾರಿಗಳಾದ ಗಣೇಶ ರಾಠೋಡ್, ಬಸವರಾಜ ಬೋವಿ, ವಿಜಯ ಕುಮಾರ ಹಾಗೂ ವಿಶ್ವನಾಥ ಇದ್ದರು.

Share This
300x250 AD
300x250 AD
300x250 AD
Back to top