Slide
Slide
Slide
previous arrow
next arrow

ವ್ಯವಸನದಿಂದ ದೂರವಿದ್ದವರು ಆರೋಗ್ಯವಂತ ಸಮಾಜದ ರೂವಾರಿಗಳು: ಐ.ಆರ್.ಗಡ್ಡೇಕರ್

300x250 AD

ದಾಂಡೇಲಿ: ಈ ದೇಶದ ಆರ್ಥಿಕ ಸದೃಢತೆಯಲ್ಲಿ ಆರೋಗ್ಯವಂತ ಸಮಾಜ ನಿರ್ಮಾಣದ ಪಾತ್ರ ಬಹುಮುಖ್ಯವಾಗಿದೆ. ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕಾದರೇ ನಾವು ನಮ್ಮ ನಿತ್ಯದ ಜೀವನದಲ್ಲಿ ಆದರ್ಶ ಸಂಸ್ಕಾರಗಳನ್ನು ಮೈಗೂಡಿಸಿಕೊಳ್ಳಬೇಕು. ವ್ಯವಸಗಳಿಂದ ದೂರವಿದ್ದವರೇ ಆರೋಗ್ಯವಂತ ಸಮಾಜ ನಿರ್ಮಾಣದ ನಿಜವಾದ ರೂವಾರಿಗಳೆಂದು ನಗರ ಪೊಲೀಸ್ ಠಾಣೆಯ ಪಿಎಸೈ ಐ.ಆರ್.ಗಡ್ಡೇಕರ್ ಹೇಳಿದರು.

ಅವರು ನಗರದ ಹಳೆ ನಗರಸಭೆಯ ಕಟ್ಟಡದಲ್ಲಿರುವ ಸೋರಗಾವಿ ಪ್ರೌಢಶಾಲೆಯಲ್ಲಿ ಪೊಲೀಸ್ ಇಲಾಖೆಯ ಆಶ್ರಯದಡಿ ನಡೆದ ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಕ್ಷಣಿಕ ಸುಖಕ್ಕಾಗಿ ವ್ಯಸನಗಳಿಗೆ ಬಲಿಯಾಗಬಾರದು. ಭವಿಷ್ಯದ ಉನ್ನತಿಗಾಗಿ ಸತತ ಅಧ್ಯಯನಶೀಲರಾಗಬೇಕೆಂದು ಅವರು ಕರೆನೀಡಿದರು.
ಈ ಸಂದರ್ಭದಲ್ಲಿ ಎಎಸೈ ಬಸವರಾಜ ಒಕ್ಕುಂದ, ಪೊಲೀಸ್ ಸಿಬ್ಬಂದಿಗಳಾದ ಮಹಾದೇವ ಸಾತಪ್ಪ ಬಳೆಗಾರ, ಚಂದ್ರಶೇಖರ್ ಮೊಳೆಕರ್ ಹಾಗೂ ಶಾಲೆಯ ಶಿಕ್ಷಕ ವೃಂದ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top