Slide
Slide
Slide
previous arrow
next arrow

ದಿನಕ್ಕೊಂದು ಕಗ್ಗ

300x250 AD

ಏನು ಜೀವನದರ್ಥ? ಏನು ಪ್ರಪಂಚಾರ್ಥ? ।
ಏನು ಜೀವಪ್ರಪಂಚಗಳ ಸಂಬಂಧ? ॥
ಕಾಣದಿಲ್ಲಿ‍ರ್ಪುದೇನಾನುಮುಂಟೆ? ಅದೇನು? ।
ಜ್ಞಾನಪ್ರಮಾಣವೇಂ? – ಮಂಕುತಿಮ್ಮ ॥ ೪ ॥

“ಈ ನಮ್ಮ ಜೀವನಕ್ಕೆ ಏನಾದರೂ ಅರ್ಥ ಇದೆಯೇ? ನಾವಿರುವ ಈ ಪ್ರಪಂಚದ ಅರ್ಥವೇನು? ನಮ್ಮ ಮತ್ತು ನಾವು ಇರುವ ಈ ಪ್ರಪಂಚದ ಪರಸ್ಪರ ಸ೦ಬ೦ಧವೇನು? ಇವೆರಡನ್ನೂ ಬೆಸೆದಿರುವ, ನಮ್ಮ ಕಣ್ಣಿಗೆ ಕಾಣದ ಒಂದು ಶಕ್ತಿ ಏನಾದರೂ ಇದೆಯೇ? ಹಾಗಿದ್ದರೆ ಅದೇನು? ಅದು ನಮ್ಮ ವಿಚಾರ ಮತ್ತು ಜ್ಞಾನದ ಪರಿಧಿಯಿಂದ ಮೀರಿದೆಯೇ? ಹಾಗಾದರೆ ಅದು ಏನು? ” ಎಂಬ ಭಾವವಿದೆ.

300x250 AD
Share This
300x250 AD
300x250 AD
300x250 AD
Back to top