Slide
Slide
Slide
previous arrow
next arrow

ಬಕ್ರೀದ್ ಹಬ್ಬಕ್ಕೆ ಶುಭಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

300x250 AD

ನವದೆಹಲಿ: ದೇಶದೆಲ್ಲೆಡೆ ಬಕ್ರೀದ್ ಹಬ್ಬವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ. ಈ ಪವಿತ್ರ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದೌಪದಿ ಮುರ್ಮು ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ ಮೋದಿ,”ಈದ್- ಉಲ್-ಅಧಾ ದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ, ಈದ್ ಮುಬಾರಕ್ ” ಎಂದು ಶುಭ ಕೋರಿದ್ದಾರೆ.

ಟ್ವಿಟ್ ಮೂಲಕ ಶುಭ ಕೋರಿರುವ ರಾಷ್ಟ್ರಪತಿ ಮುರ್ಮು, “ಪ್ರೀತಿ, ತ್ಯಾಗದ ಪವಿತ್ರ ಹಬ್ಬ ಬಕ್ರೀದ್. ಈ ಹಬ್ಬವು ಪರಿತ್ಯಾಗದ ಮಾರ್ಗವನ್ನು ಅನುಸರಿಸಲು ಮತ್ತು ಮಾನವೀಯತೆಯ ಸೇವೆಯನ್ನು ನಿಸ್ವಾರ್ಥವಾಗಿ ಮಾಡಲು ಪ್ರೇರೇಪಿಸುತ್ತದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಪರಸ್ಪರ ಸೌಹಾರ್ದತೆಯನ್ನು ಹೆಚ್ಚಿಸಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ” ಎಂದಿದ್ದಾರೆ.

Share This
300x250 AD
300x250 AD
300x250 AD
Back to top