ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಜು. 5 ರಂದು ಬೆಳಿಗ್ಗೆ 8.30 ಗಂಟೆಯವರೆಗೆ ಭಾರಿ ಮಳೆ ಬೀಳುವ ಸೂಚನೆಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರು ಮಾಹಿತಿ ನೀಡಿದೆ.
ಹೀಗಾಗಿ ಜಿಲ್ಲಾಡಳಿತವು ಮುಂಜಾಗ್ರತೆಗಾಗಿ ಜು. 5 ರಂದು ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ಪ್ರದೇಶಗಳ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.