Slide
Slide
Slide
previous arrow
next arrow

ಈಡಿಗ ನಿಗಮ ರಚಿಸಿ ಹಣ ಮೀಸಲಿಡಲು ಪ್ರಣವಾನಂದ ಸ್ವಾಮೀಜಿ ಮನವಿ

300x250 AD

ಗೋಕರ್ಣ: ಸಮಸ್ತ ಈಡಿಗ ಅಭಿವೃದ್ಧಿಗಾಗಿ ಶ್ರೀನಾರಾಯಣಗುರು ನಿಗಮ ಸ್ಥಾಪಿಸಿ ಪ್ರತಿವರ್ಷ 250 ಕೋಟಿ ರೂ. ಮೀಸಲಿಡುತ್ತೇವೆ ಎಂದು ಚುನಾವಣೆಯ ಸಮಯದಲ್ಲಿ ಭರವಸೆ ನೀಡಿದ್ದೀರಿ. ಅದರಂತೆ ಈಗ ಬಜೆಟ್ ಅಧಿವೇಶನದಲ್ಲಿ ಇದನ್ನು ಜಾರಿಗೊಳಿಸಿ ನಮ್ಮ ಸಮುದಾಯದ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಶ್ರೀ ಪ್ರಣವಾನಂದ ಸ್ವಾಮೀಜಿಯವರು ಮಂಗಳವಾರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಅವರೊಂದಿಗೆ ಪ್ರಣವಾನಂದ ಸ್ವಾಮೀಜಿಯವರು ಮಾತುಕತೆ ನಡೆಸಿದರು. ಹಾಗೇ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಅವರನ್ನು ಭೇಟಿಯಾಗಿ ಈ ಕುರಿತು ಪಕ್ಷದಲ್ಲಿ ಚುನಾವಣೆ ಸಂದರ್ಭದಲ್ಲಿ ನೀಡಿದ ಆಶ್ವಾಸನೆಯನ್ನು ಈ ಬಜೆಟ್‌ನಲ್ಲಿ ಈಡೇರಿಸುವಂತೆ ನೋಡಿಕೊಳ್ಳಬೇಕು ಎಂದು ಶ್ರೀಗಳು ತಿಳಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಈಡಿಗ, ಬಿಲ್ಲವ, ನಾಮಧಾರಿ, ದೀವರ ಮಹಾಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿ ಡಾ.ಬಿ.ಎಚ್.ಮಂಚೇಗೌಡ, ರಾಜ್ಯ ಉಪಾಧ್ಯಕ್ಷ ಜನಾರ್ಧನ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಸಿದ್ದಾಪುರ, ರಾಜ್ಯ ಉಪಾಧ್ಯಕ್ಷ ನಾಗರಾಜ ನಾಯ್ಕ, ರಾಜ್ಯ ಮಹಿಳಾ ಅಧ್ಯಕ್ಷೆ ಅಂಬಿಕಾ ಗುತ್ತೆದಾರ, ಮಹಿಳಾ ಪ್ರಭಾರಿ ಗಾಯತ್ರಿ, ರಾಜ್ಯ ಪ್ರದಾನ ಕಾರ್ಯದರ್ಶಿ ಗುರುರಾಜ, ಉಪಾಧ್ಯಕ್ಷ ಸುನೀಲ ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top