ಶಿರಸಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉತ್ತರ ಕನ್ನಡ ತಾಲೂಕಾ ಘಟಕ ಶಿರಸಿ ಆಶ್ರಯದಲ್ಲಿ 2022/23ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಜು.19 ರಂದು ಮಧ್ಯಾಹ್ನ 3.30ಕ್ಕೆ ನಗರದ ಟಿಎಂಎಸ್ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಹಿರಿಯ ಸಾಹಿತಿ, ಪತ್ರಕರ್ತ ರಾಜೀವ ಅಜ್ಜೀಬಳ ಉದ್ಘಾಟಿಸಲಿದ್ದು ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಅಧ್ಯಕ್ಷತೆ ವಹಿಸಲಿದ್ದು, ಕಸಾಪ ಶಿರಸಿ ಘಟಕದ ಅಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ, ಶಿರಸಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ನಾಯ್ಕ,ಕಸಾಪ ಜಿಲ್ಲಾ ಕಾರ್ಯದರ್ಶಿ ಜಾರ್ಜ್ ಫರ್ನಾಂಡಿಸ್, ನಿವೃತ್ತ ಬ್ಯಾಂಕ್ ಪ್ರಬಂಧಕ ಹಾಗೂ ಸಿಬಿಐ ಅಧಿಕಾರಿ ಶಿವಾನಂದ ದೀಕ್ಷಿತ್, ಶಿರಸಿ ಡಿವೈಎಸ್ಪಿ ಗಣೇಶ ಕೆ.ಎಲ್, ಶಿರಸಿ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಜಿ. ಹೆಗಡೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶಿರಸಿ ಅಧ್ಯಕ್ಷ ಸುರೇಶ್ ಪಟಗಾರ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮದಲ್ಲಿ 2022-23 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುತ್ತಿದೆ. ಎಂದು ಕಸಾಪ ಶಿರಸಿ ಘಟಕದ ಅಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.