ಶಿರಸಿ: ಕರ್ನಾಟಕ ರಾಜ್ಯ ಅಡಿಕೆ ಸಹಕಾರ ಸಂಘಗಳ ಸಹಕಾರ ಮಹಾಮಂಡಳದ ನೇತೃತ್ವದಲ್ಲಿ ಗುರುವಾರ ಬೆಂಗಳೂರಿನ ಶಾಸಕರ ಭವನದಲ್ಲಿ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಶಾಸಕರು ಹಾಗೂ ಎಮ್ಎಲ್ಸಿಗಳ ಸಭೆ ನಡೆಯಿತು.
ಅಡಿಕೆ ಎಲೆಚುಕ್ಕಿ ರೋಗ ನಿವಾರಣೆಗೆ ಶಾಶ್ವತ ಪರಿಹಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ವಿದೇಶದಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದು ಅಡಿಕೆ ಬೆಳೆಗಾರರ ಮೇಲೆ ಭಾರೀ ಪರಿಣಾಮ ಬೀರುತ್ತಿದೆ. ಇದರಿಂದ ಬೆಲೆ ಏರಿಳಿತವಾಗುತ್ತಿದ್ದು ಈ ಬಗ್ಗೆ ಕೇಂದ್ರ ಸರ್ಕಾರದ ಬಳಿ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಬೇಕು ಹಾಗೂ ಅಡಿಕೆ ಬೆಳೆಗೆ ಸಂಬ0ಧಿಸಿ ಎದುರಾಗುವ ಎಲ್ಲ ರೀತಿಯ ಸಮಸ್ಯೆಗಳಿಗೆ ಅಡಿಕೆ ಬೆಳೆಯುವ ಪ್ರದೇಶದ ಜನಪ್ರತಿನಿಧಿಗಳು ಒಟ್ಟಾಗಿ ಹೋರಾಟ ನಡೆಸಿ ಪರಿಹಾರ ಕಂಡುಕೊಳ್ಳಬೇಕೆ0ಬ ಒಮ್ಮತದ ತೀರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.
ಸಭೆಯಲ್ಲಿ ಮಾಜಿ ಸಚಿವ ಅರಗ ಜ್ಞಾನೇಂದ್ರ, ಸಚಿವ ಶಿವಾನಂದ ಪಾಟೀಲ, ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಿವರಾಮ ಹೆಬ್ಬಾರ, ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ, ಟಿ.ಬಿ. ಜಯಚಂದ್ರ ಸೇರಿದಂತೆ 20ಕ್ಕೂ ಹೆಚ್ಚಿನ ಶಾಸಕರು ಹಾಗೂ ಎಮ್ಎಲ್ಸಿ ಶಾಂತಾರಾಮ ಸಿದ್ದಿ, ರಾಜ್ಯ ಅಡಿಕೆ ಮಹಾಮಂಡಳದ ಅಧ್ಯಕ್ಷರಾದ ವೈ.ಎಸ್.ಸುಬ್ರಹ್ಮಣ್ಯ, ಟಿಎಸ್ಎಸ್ ನಿರ್ದೇಶಕ ಹಾಗೂ ಮಹಾಮಂಡಳದ ಉಪಾಧ್ಯಕ್ಷರಾದ ಶಶಾಂಕ ಶಾಂತಾರಾಮ ಹೆಗಡೆ, ಶೀಗೇಹಳ್ಳಿ, ಎಚ್.ಎಸ್. ಮಂಜಪ್ಪ ಸೊರಬ ಪಾಲ್ಗೊಂಡಿದ್ದರು.