ಯಲ್ಲಾಪುರ: ತಾಲೂಕಿನ ಅಡಿಕೆ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾಪಂಚಾಯತ್ ಉತ್ತರ ಕನ್ನಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಯಲ್ಲಾಪುರ, ಹಾಗೂ ಗ್ರೀನ್ ಕೇರ್ (ರಿ.) ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಜು. ಬುಧವಾರ ಬೆಳಗ್ಗೆ 9:30ಕ್ಕೆ “ವಿಶ್ವ ಜನಸಂಖ್ಯಾ ದಿನಾಚರಣೆ/ ಅಭಿಯಾನ 2023” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಲ್ಲಾಪುರ ಮುಂಡಗೋಡ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ ದೀಪ ಬೆಳಗಿಸಿ ಉದ್ಘಾಟಿಸಿ ವಿಶ್ವ ದಿನ ಸಂಖ್ಯಾ ದಿನಾಚರಣೆ ಬಗ್ಗೆ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿಗಳು ಡಾ॥ ನರೇಂದ್ರ ಪವಾರ್ ಉಪಸ್ಥಿತರಿದ್ದರು, ಕಾರ್ಯಕ್ರಮದ ಅತಿಥಿಗಳಾಗಿ ತಾ.ಪಂ.ಯಲ್ಲಾಪುರದ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕಮ್ಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ಗ್ರೀನ್ ಕೇರ್ ಕಾರ್ಯದರ್ಶಿ ಜಿತೇಂದ್ರ ಕುಮಾರ್ ತೋನ್ಸೆ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ॥ ಕ್ಯಾ. ರಮೇಶ್ ರಾವ್, ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಿರುವತ್ತಿಯ ರಿಯಾಜ್ ಅಹಮದ್ ನದಾಫ್ ಇವರಿಗೆ ಅತಿ ಹೆಚ್ಚು ಪುರುಷರ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಕ್ಕಾಗಿ ಗ್ರೀನ್ ಕೇರ್(ರಿ.) ಶಿರಸಿಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ತಾಲೂಕಿನ ಆಶಾಕರ್ತೆಯರಾದ ಸುಮಾ ಚೌಹಾಣ ಮತ್ತು ವೀಣಾ ಜಠರಾಮ ಕುಂಟಿಯವರಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು ತಾಲೂಕು ಆಸ್ಪತ್ರೆಯ ತಜ್ಞ ವೈದ್ಯರಾದ ಡಾ॥ ಸೌಮ್ಯ ಕೆ. ವಿ. ವಿಶ್ವ ಜನಸಂಖ್ಯಾ ದಿನಾಚರಣೆಯ ಬಗ್ಗೆ ಉಪನ್ಯಾಸ ನೀಡಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎಸ್.ಟಿ. ಭಟ್ ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿದರು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮಹೇಶ್ ತಾಳಿಕೋಟೆ ವಂದನಾರ್ಪಣೆಯನ್ನು ಮಾಡಿದರು.