Slide
Slide
Slide
previous arrow
next arrow

ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಡೆಹರಾಡೊನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ 8ನೇ ತರಗತಿಗೆ ಪ್ರವೇಶ ಪಡೆಯಲು ಕರ್ನಾಟಕ ಮೂಲದ ಬಾಲಕ ಮತ್ತು ಬಾಲಕೀಯರಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜುಲೈ 2024ನೇ ಸಾಲಿನ ಪ್ರವೇಶಾತಿಗೆ ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 2ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಸರಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ದಿನಾಂಕ 01-07-2024ರಂತೆ 111/2 ವರ್ಷದಿಂದ 13 ವರ್ಷದೊಳಗಿರುವ ಬಾಲಕರು ಮತ್ತು ಬಾಲಕಿಯರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಾಗಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: tel:+9108025589459ಅಥವಾ tel:+9108382226538 ನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top