ಕಾರವಾರ: ಅಂಕೋಲಾ ತಾಲ್ಲೂಕಿನ ಅವರ್ಸಾ, ಹಿಲ್ಲೂರು, ಮೊಗಟಾ, ಬೆಳಂಬರ ಗ್ರಾಮ ಪಂಚಾಯತಿಗಳಿಗೆ ಭಾರತೀಯ ಜನತಾ ಪಕ್ಷದ ಬೆಂಬಲಿತರು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳಾಗಿ ಆಯ್ಕೆಯಾಗಿದ್ದು, ನೂತನ ಅಧ್ಯಕ್ಷ-ಉಪಾಧ್ಯಕ್ಷರುಗಳಿಗೆ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಮಂಗಳವಾರ ಗ್ರಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಅವರ್ಸಾ ಗ್ರಾಮ ಪಂಚಾಯತಿಗೆ ಅಧ್ಯಕ್ಷರಾಗಿ ಸವಿತಾ ನಾಗರಾಜ ಆಗೇರ ಹಾಗೂ ಉಪಾಧ್ಯಕ್ಷರಾಗಿ ಶಿಲ್ಪಾ ಗಣೇಶ ನಾಯ್ಕ ಆಯ್ಕೆಯಾಗಿದ್ದಾರೆ. ಹಿಲ್ಲೂರ ಗ್ರಾಮ ಪಂಚಾಯತಿಗೆ ಅಧ್ಯಕ್ಷರಾಗಿ ಮಾಲತಿ ಬೀರಣ್ಣ ನಾಯಕ ಹಾಗೂ ಉಪಾಧ್ಯಕ್ಷರಾಗಿ – ಬೀರಣ್ಣ ನಾಯಕ (ಬಾಬು ಸುಂಕೇರಿ) ಆಯ್ಕೆಯಾದರು.
ಮೊಗಟ ಗ್ರಾಮ ಪಂಚಾಯತಿಗೆ ಅಧ್ಯಕ್ಷರಾಗಿ ಸುಮನಾ ಬಾಬು ನಾಯಕ ಹಾಗೂ ಉಪಾಧ್ಯಕ್ಷರಾಗಿ ಸುಜಾತ ಸಂದೀಪ ಆಗೇರ ಆಯ್ಕೆಯಾಗಿದ್ದಾರೆ. ಬೆಳಂಬಾರ ಗ್ರಾಮ ಪಂಚಾಯತಿಗೆ ಅಧ್ಯಕ್ಷರಾಗಿ ಜ್ಯೋತಿ ದಿಗಂಬರ ಖಾರ್ವಿ ಆಯ್ಕೆಯಾಗಿದ್ದಾರೆ. ಇವರ ಅಧಿಕಾರಾವಧಿಯಲ್ಲಿ ಅಯಾ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಆಗಲಿ ಎಂದು ಆಶಿಸುವುದಾಗಿ ರೂಪಾಲಿ ಎಸ್.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಹಾಗೂ ಆಯ್ಕೆಗೆ ಸಹಕರಿಸಿದ ಸದಸ್ಯರುಗಳು, ಪಕ್ಷದ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.