ಕುಮಟಾ: ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಕಾಲೇಜು ಜೀವನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಶಾಸಕ ದಿನಕರ ಶೆಟ್ಟಿ ಕರೆ ನೀಡಿದರು.
ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ ಮಾತನಾಡಿ, ವಿದ್ಯಾರ್ಥಿಗಳಿಗೆ ಸೋಲನ್ನೇ ಗೆಲುವಿನ ಮೆಟ್ಟಿಲಾಗಿ ರೂಪಿಸಿಕೊಳ್ಳುವಂತೆ ಕರೆನೀಡಿದರು. ಕಠಿಣ ಪರಿಶ್ರಮ, ಕನಸನ್ನು ಕಾಣುವ ಮನಸ್ಥಿತಿ, ಮುನ್ನುಗ್ಗುವ ಛಲ ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ,ತಾಳ್ಮೆ ರೂಪಿಸಿಕೊಳ್ಳುವಂತೆ ತಿಳಿಸಿದರು. ಅರಕ್ಷಕ ಉಪ ನಿರೀಕ್ಷಕ ಸಂಪತ್ ಇ.ಸಿ, ಬದ್ಧತೆ ಇದ್ದಲ್ಲಿ ಸಾಧನೆ ಸಾಧ್ಯ.ಧನಾತ್ಮಕ ಚಿಂತನೆ ಬೆಳೆಸಿಕೊಳ್ಳಿ.ಕಾಲೇಜಿನ ಸೌಲಭ್ಯ ಬಳಸಿಕೊಳ್ಳಿ ಎಂದರು.
ವೇದಿಕೆಯಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ತುಳಸಿ ಗೌಡ, ಪ್ರಾಚಾರ್ಯೆ ವಿಜಯಾ ಡಿ.ನಾಯ್ಕ, ಡಾ.ಗೀತಾ ನಾಯಕ, ಐ.ಕೆ.ನಾಯ್ಕ, ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಜಯರಾಮ ಭಟ್ಟ, ಗಜಾನನ ಶೆಟ್ಟಿ, ಯೋಗೇಶ ಪಟಗಾರ, ದೈಹಿಕ ಶಿಕ್ಷಣ ನಿರ್ದೇಶಕಿ ಶಾರದಮ್ಮ ಬಿ., ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಮೂರ್ತಿ ಐ.ಆರ್ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಕೀರ್ತಿ, ವಿನಾಯಕ ಹಾಜರಿದ್ದರು.